ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿಸೆಂಬರ್ 10ರಂದು ಮತದಾನ: ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಗೆ ದ್ವೈವಾರ್ಷಿಕ ಚುನಾವಣೆ ಘೋಷಿಸಲಾಗಿದ್ದು, ಡಿಸೆಂಬರ್‌ 10 ರಂದು ಮತದಾನ ಹಾಗೂ ಡಿಸೆಂಬರ್‌ 14 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ದ್ವೈವಾರ್ಷಿಕ ಚುನಾವಣೆಯ ಸಂಬಂಧ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅದರನ್ವಯ 2021ರ ನವೆಂಬರ್ 16ರ ಮಂಗಳವಾರದಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರಗಳನ್ನು ಸಲ್ಲಿಸಲು 2021ರ ನವೆಂಬರ್ 23ರ ಮಂಗಳವಾರ ಕೊನೆಯ ದಿನವಾಗಿದ್ದು, 2021ರ ನವೆಂಬರ್ 24ರ ಬುಧವಾರ ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು 2021ರ ನವೆಂಬರ್ 26ರ ಶುಕ್ರವಾರ ಕೊನೆಯ ದಿನವಾಗಿದೆ. 2021ರ ಡಿಸೆಂಬರ್ 10ರ ಶುಕ್ರವಾರ ಬೆಳಿಗ್ಗೆ 8.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯವರೆಗೆ ಮತದಾನ ನಡೆಯಲಿದ್ದು, 2021ರ ಡಿಸೆಂಬರ್ 14ರ ಮಂಗಳವಾರ ಬೆಳಿಗ್ಗೆ 8.00 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಹಾಗೂ 2021ರ ಡಿಸೆಂಬರ್ 16ರ ಗುರುವಾರದಂದು ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ಮತ್ತು ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಮಾಗಡಿ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಒಳಪಟ್ಟಿವೆ ಎಂದರಲ್ಲದೆ, 2021ರ ನವೆಂಬರ್ 11 ರಂದು ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಪ್ರಕಟಿಸಲಾಗಿದ್ದು, ಅದರನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಈ ಕ್ಷೇತ್ರದಲ್ಲಿ ಒಟ್ಟು 3898 ಮತದಾರರಿದ್ದು, ಈ ಪೈಕಿ 1862 ಪುರುಷ ಮತದಾರರು ಹಾಗೂ 2036 ಮಹಿಳೆ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದಲ್ಲಿ ಒಟ್ಟು 227 ಮತಗಟ್ಟೆಗಳಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು, ರಾಮನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಆರಕ್ಷಕ ಉಪ ಆಯುಕ್ತರು, ಈಶಾನ್ಯ ವಲಯದವರೊಂದಿಗೆ ಸುಧೀರ್ಘವಾಗಿ ಸಮಾಲೋಚಿಸಿ, ಈ ಕ್ಷೇತ್ರದ ಒಟ್ಟು ಮತಗಟ್ಟೆಗಳ ಪೈಕಿ ಅತಿ ಸೂಕ್ಷ್ಮ, ಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳಿಗೆ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಹೋಂ ಗಾರ್ಡ್ಸ್ ಸೇರಿದಂತೆ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗುವುದು ಎಂದರು.

ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ಮಾನದಂಡಗಳ ಮೇರೆಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಚುನಾವಣಾ ವೀಕ್ಷಕರುಗಳೊಂದಿಗೆ ಚರ್ಚಿಸಿ, ಈ ಜಿಲ್ಲೆಯಲ್ಲಿ Vulnerable ಮತಗಟ್ಟೆಗಳನ್ನು ಗುರುತಿಸಿ, ಅಂತಹ ಮತಗಟ್ಟೆಗಳಿಗೆ ವಿಶೇಷ ಭದ್ರತೆ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರ ಸಹಯೋಗದೊಂದಿಗೆ “ನಿಯೋಜನಾ ಯೋಜನೆ” (ಡೆಪ್ಲಾಯಿಮೆಂಟ್ ಪ್ಲಾನ್) ತಯಾರಿಸಲಾಗುವುದು ಹಾಗೂ ಮೈಕ್ರೋ ವೀಕ್ಷಕರನ್ನು, ವಿಡಿಯೋ ಗ್ರಾಫರ್‌ಗಳನ್ನು ನೇಮಕ ಮಾಡುವುದಲ್ಲದೆ, ಆಯ್ದ ಮತಗಟ್ಟೆಯಲ್ಲಿ ವೆಬ್ ಕ್ಯಾಮರಾ ಮುಖಾಂತರ ಮತಗಟ್ಟೆಯ ಆಗು ಹೋಗುಗಳನ್ನು ಸೆರೆಹಿಡಿಯುವುದು ಮುಂತಾದ ಅಗತ್ಯ ಕ್ರಮಗಳನ್ನು ವಹಿಸಲಾಗುವುದು ಎಂದು ತಿಳಿಸಿದರು.

ಈ ಕ್ಷೇತ್ರದಲ್ಲಿ ಒಟ್ಟು 227 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೆ ಒಬ್ಬ ಪಿ.ಆರ್.ಓ. ಮತ್ತು ಒಬ್ಬ ಮತಗಟ್ಟೆ ಅಧಿಕಾರಿ ಲೆಕ್ಕದಲ್ಲಿ, ಶೇ.10 ರಷ್ಟು ಮೀಸಲು ಸೇರಿ, ಒಟ್ಟು 600 ಸಿಬ್ಬಂದಿಯ ಸೇವೆಯು ಅವಶ್ಯಕತೆ ಇದ್ದು, ಈ ಸಿಬ್ಬಂದಿಯು ಈ ಕ್ಷೇತ್ರದ 8 ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಲಭ್ಯವಿದ್ದು, ನೇಮಕಾತಿಗೆ ಕ್ರಮ ವಹಿಸಲಾಗುತ್ತಿದೆ. ಸದರಿ ಸಿಬ್ಬಂದಿಗಳಿಗೆ ಮಾಸ್ಟರ್ ಟ್ರೈನರ್ಸ್ ಗಳ ಮುಖಾಂತರ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಅನುಷ್ಠಾನ ತಂಡಗಳಿಗೆ ಮತ್ತು ಮತದಾನ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ತಲುಪಿಸುವ ಕಾರ್ಯಕ್ಕಾಗಿ ಈ ಕ್ಷೇತ್ರಕ್ಕೆ ಅವಶ್ಯವಿರುವ ಬಸ್ ಮತ್ತು ಮಿನಿ ಬಸ್‌ಗಳನ್ನು ಕೆ.ಎಸ್.ಆರ್.ಟಿ.ಸಿ. ಅವರ ಮುಖಾಂತರ ಪಡೆದುಕೊಳ್ಳಲು ಹಾಗೂ ಜೀಪ್/ ವ್ಯಾನ್‌ಗಳನ್ನು ವಿವಿಧ ಇಲಾಖೆಗಳಿಂದ ಪಡೆದು ಸಂಬಂಧಪಟ್ಟವರಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರಲ್ಲದೆ, ಮಾದರಿ ನೀತಿ ಸಂಹಿತೆ ಅನುಷ್ಠಾನದ ವಿಚಾರವಾಗಿ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಚುನಾವಣೆ ಸಂಬಂಧ “ದೂರು ನಿರ್ವಹಣಾ ಮತ್ತು ಸಹಾಯವಾಣಿ ಕೇಂದ್ರ”ವನ್ನು(Complaint Monitoring Cell) ಸ್ಥಾಪಿಸಲಾಗಿದ್ದು, ಈ ಘಟಕದಲ್ಲಿ 2 ಪಾಳಿಗಳಲ್ಲಿ (shift) ಕಾರ್ಯ ನಿರ್ವಹಿಸಲು ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಅದರಂತೆ, ಈ ಕ್ಷೇತ್ರದ 2 ಜಿಲ್ಲೆಗಳ 8 ತಾಲ್ಲೂಕು ಕಚೇರಿಗಳಲ್ಲೂ ದೂರು ನಿರ್ವಹಣಾ ಕೇಂದ್ರಗಳನ್ನು ತೆರೆದು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಚುನಾವಣೆಯಿಂದ ಭಾವಚಿತ್ರವಿರುವ ಮತಪತ್ರವನ್ನು ಆಯೋಗವು ಜಾರಿಗೆ ತಂದಿರುವುದರಿ,ದ, ಮತಪತ್ರದಲ್ಲಿ ಅಭ್ಯರ್ಥಿಗಳ ಹೆಸರಿನ ಮುಂದೆ ಭಾವಚಿತ್ರವನ್ನು ಸಹ ಮುದ್ರಿಸಲಾಗುವುದು ಎಂದರಲ್ಲದೆ, ಪ್ರಸ್ತುತ ಚುನಾವಣೆಯಲ್ಲಿ ಮತದಾನಕ್ಕೆ ಮತಪಟ್ಟಿಗೆಗಳನ್ನು ಬಳಸಲಾಗುತ್ತಿದ್ದು, ಈ ಚುನಾವಣೆಯಲ್ಲಿ NOTA (None of the above) ಜಾರಿಯಲ್ಲಿ ಇರುವುದಿಲ್ಲ ಹಾಗೂ ಮತಪತ್ರದಲ್ಲಿ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳ ಹೆಸರಿನ ನಂತರ ಕೊನೆಯ ಅಂಕಣದಲ್ಲಿ NOTA ಎಂಬುದನ್ನು ನಮೂದು ಮಾಡಲಾಗುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರ-17ಕ್ಕೆ ಸಂಬಂಧಿಸಿದಂತೆ ಈ ಕ್ಷೇತ್ರಕ್ಕೆ ಒಳಪಡುವ ಎರಡೂ ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಧೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಕೊಲೆಯಲ್ಲಿ ಅಂತ್ಯವಾದ ಸ್ನೇಹಿತರ ಜಗಳ..!

ದೊಡ್ಡಬಳ್ಳಾಪುರ: ಕೊಲೆಯಲ್ಲಿ ಅಂತ್ಯವಾದ ಸ್ನೇಹಿತರ ಜಗಳ..!

ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಗೆಳೆಯರ ನಡುವೆ ಕ್ಷುಲಕ ಕಾರಣಕ್ಕಾಗಿ ಭಾನುವಾರ ನಡೆದ ಜಗಳ ಕೊಲೆಯಲ್ಲಿ (Murder)

[ccc_my_favorite_select_button post_id="109284"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]