ದೊಡ್ಡಬಳ್ಳಾಪುರ: ಸತತವಾಗಿ ಸುರಿಯುತ್ತಿರುವ ಮಳೆಯ ಕಾರಣ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಪರಿಣಾಮ, ವಾಹನ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ದೊಡ್ಡಬಳ್ಳಾಪುರ – ದೇವನಹಳ್ಳಿ ನಡುವಿನ ಎಲ್&ಟಿ ಕಾರ್ಖಾನೆ ಬಳಿ ನಡೆದಿದೆ.
ಸೋಮವಾರ ಬೆಳಗ್ಗೆ ಸುಮಾರು 9.30ಗಂಟೆ ಸಮಯದಲ್ಲಿ ತೀವ್ರ ವಾಹನ ದಟ್ಟಣೆಯಿರುವ ದೊಡ್ಡಬಳ್ಳಾಪುರ – ದೇವನಹಳ್ಳಿ ನಡುವಿನ ರಸ್ತೆಗೆ ಬೃಹತ್ ಮರ ಅಡ್ಡಲಾಗಿ ಬಿದ್ದಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಉಂಟಾಗಿಲ್ಲವಾದರು, ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ವಿದ್ಯುತ್ ಕಡಿತವಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿ, ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಮರ ತೆರವು ಕಾರ್ಯದಲ್ಲಿ ತೊಡಗಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…