ದಿನ ಭವಿಷ್ಯ: ಮಂಗಳವಾರ ನವೆಂಬರ್ 16, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ

ಮೇಷ: ಈ ರಾಶಿಯವರು ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೃಷಭ: ಈ ರಾಶಿಯವರು ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಈ ರಾಶಿಯವರು ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ. ನಿಮ್ಮ ವೃತ್ತಿರಂಗದಲ್ಲಿ ಸ್ಥಾನ ಮಾನ ಸುಧಾರಣೆಗೆ ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಕಟಕ: ಈ ರಾಶಿಯವರು ಕೌಟುಂಬಿಕವಾಗಿ ನಡೆಸುವ ಕೆಲವೊಂದು ನಿರ್ಧಾರಗಳು ವೈಯಕ್ತಿಕವಾಗಿ ನಿಮಗೆ ಕಿರಿ ಕಿರಿಯೆನಿಸೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.

ಸಿಂಹ: ಈ ರಾಶಿಯವರು ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ.

ಕನ್ಯಾ: ಈ  ರಾಶಿಯವರ ದೂರ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆಪ್ತರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ.

ತುಲಾ: ಈ ರಾಶಿಯವರು ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸಲು ಸಕಾಲ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಾತಿನ ಮೇಲೆ ಸಂಯಮವಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಈ ರಾಶಿಯವರಿಗೆ ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ. ಆಕಸ್ಮಿಕ ದೂರ ಪ್ರಯಾಣ 

ಧನಸ್ಸು: ಈ ರಾಶಿಯವರು ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ನೆಂಟರಿಷ್ಟರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಈ ರಾಶಿಯವರು ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ.

ಕುಂಭ: ಈ ರಾಶಿಯವರ ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಬೆಲೆ ಕೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಈ ರಾಶಿಯವರು ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಸಂವತ್ಸರ: ಶ್ರೀ ಪ್ಲವ ನಾಮ  ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಾದಶಿ

ನಕ್ಷತ್ರ:  ರೇವತಿ ನಕ್ಷತ್ರ 

ರಾಹುಕಾಲ: 03:02 ರಿಂದ 04:29

ಗುಳಿಕಕಾಲ: 12:08 ರಿಂದ 1:35

ಯಮಗಂಡಕಾಲ: 09:14 ರಿಂದ 10:41

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!