ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಮಂಡಳಿಗೆ ನ.21ರಂದು ನಡೆಯಲಿರುವ ಚುನಾವಣೆಗೆ, ತಾಲೂಕಿನಲ್ಲಿ ಮೂರು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಮಂಡಳಿಗೆ ನಡೆಯುವ ಚುನಾವಣೆಗೆ ತಾಲೂಕಿಗೆ ಸಂಬಂಧಿಸಿದಂತೆ ತಾಲೂಕು ಕಚೇರಿಯಲ್ಲಿ ಎರಡು ಹಾಗೂ ಮಧುರೆಯಲ್ಲಿ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ.
ತಾಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಎರಡು ಮತಗಟ್ಟೆಯಲ್ಲಿ ನಗರಸಭೆ, ಕಸಬಾ ದೊಡ್ಡಬೆಳವಂಗಲ, ತೂಬಗೆರೆ ಹೋಬಳಿಯ 1467 ಮತದಾರರು ಮತಚಲಾಯಿಸಬಹುದಾಗಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮಧುರೆ ಹೋಬಳಿಯ 872 ಮಂದಿ ಮತದಾರರು ಮತಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……