ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರ-17 ರಿಂದ ರಾಜ್ಯ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ, ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ, ಸ್ವೀಕೃತವಾಗುವ ದೂರಗಳನ್ನು ಸ್ವೀಕರಿಸಲು ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದೆ.
ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ, ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಯಾವುದೇ ದೂರುಗಳು/ ಮಾಹಿತಿಗಳನ್ನು ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ: 080-29787451ಅಥವಾ ಅಬಕಾರಿ ಇಲಾಖೆಯ ಟೋಲ್ ಫ್ರೀ ಸಂಖ್ಯೆ: 18004252550 ಕ್ಕೆ ಕರೆಮಾಡಿ ತಿಳಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….