ಜ.30 ರೊಳಗೆ ದೇವಸ್ಥಾನಗಳ ಆಡಿಟ್‌ ರಿಪೋರ್ಟ್‌ ಸಲ್ಲಿಸದ ಅಧಿಕಾರಿಗಳ ಮೇಲೆ ಕಠಿಣ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಲೆಕ್ಕಪತ್ರ ತಪಾಸಣೆ ನಡೆದಿಲ್ಲ. ಇದು ದೇವಸ್ಥಾನದ ಆಡಳಿತದ ವಿಷಯದಲ್ಲಿ ಜನರಲ್ಲಿ ಸಂಶಯ ಮೂಡಿಸುತ್ತದೆ. ಈ ನಿಟ್ಟಿನಲ್ಲಿ ಜ.30, 2022 ರ ಒಳಗಾಗಿ ಲೆಕ್ಕಪತ್ರ ತಪಾಸಣೆ ವರದಿಯನ್ನು ಸಲ್ಲಿಸದ ದೇವಸ್ಥಾನದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ, ಹಜ್‌ ಹಾಗೂ ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧಲ್ಲಿ ನಡೆದ ಎ ಮತ್ತು ಬಿ ವರ್ಗದ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗೊಳೊಂದಿಗಿನ ಸಭೆಯಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳ ಅಭಿವೃದ್ದಿ ಕಾರ್ಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು  ವರದಿಯನ್ನು ಪಡೆದುಕೊಂಡರು.

ಈ ವೇಳೆ ಮಾತನಾಡಿದರು ಅವರು, ಜನವರಿ 30,2022 ರ ಒಳಗಾಗಿ ಮಜರಾಯಿ ದೇವಸ್ಥಾನಗಳು ಬಾಕಿ ಇರುವ ಎಲ್ಲಾ ವರ್ಷಗಳ ಲೆಕ್ಕಪತ್ರ ತಪಾಸಣೆಯ ವರದಿಯನ್ನು ಸಲ್ಲಸಬೇಕು. ರಾಜ್ಯದಲ್ಲಿ 207 ಎ ದರ್ಜೆ, 139 ಬಿ ದರ್ಜೆ ದೇವಸ್ಥಾನಗಳಿವೆ. ಆದಾಯ ಕಡಿಮೆ ಇರುವ 34217 ಸಿ ದರ್ಜೆಯ ದೇವಸ್ಥಾನಗಳಿವೆ. ಇವುಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ, ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನ, ಘಾಟಿ ಸುಬ್ರಮಣ್ಯ ಮತ್ತು ಬೆಂಗಳೂರಿನ ಬನಶಂಕರಿ ದೇವಸ್ಥಾನಗಳಲ್ಲಿ ಮಾತ್ರ ಪ್ರತಿವರ್ಷ ಲೆಕ್ಕತಪಾಸಣಾ ವರದಿಯನ್ನು ನೀಡಲಾಗಿದೆ. ಇನ್ನುಳಿದ ದೇವಸ್ಥಾನಗಳಲ್ಲಿ ಹಲವು ದೇವಸ್ಥಾನಗಳ ಲೆಕ್ಕಪತ್ರ ತಪಾಸಣೆಯ ಸುಮಾರು ಎರಡು ದಶಕಗಳಿಂದ ಬಾಕಿ ಇದೆ. ಈ ರೀತಿ ಲೆಕ್ಕಪತ್ರ ವರದಿಯನ್ನು ನೀಡದೇ ಇರುವುದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಆಡಳಿತದ ಬಗ್ಗೆ ಸಂಶಯ ಹುಟ್ಟು ಹಾಕುತ್ತದೆ. ಇನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ದೇವಸ್ಥಾನಗಳು ತಮ್ಮ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸುವುದು ಕಡ್ಡಾಯ. ಮುಂದಿನ ಜನವರಿ 30 ರ ಒಳಗಾಗಿ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸದೇ ಇದ್ದಲ್ಲಿ ಆಯಾ ದೇವಸ್ಥಾನಗಳ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು

ರಾಜ್ಯದ ಸಮಗ್ರ ದೇವಸ್ಥಾನಗಳ ಇಂಟಿಗ್ರೇಟೆಡ್‌ ವೆಬ್‌ಸೈಟ್‌ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ದೇವಸ್ಥಾನಗಳ ಇತಿಹಾಸ, ಐತಿಹ್ಯ ಹಾಗೂ ದೇವಸ್ಥಾನದ ಮಹತ್ವ ವನ್ನು ವೆಬ್‌ಸೈಟ್‌ ನಲ್ಲಿ ಅಳವಡಿಸಲು ಮಾಹಿತಿಯನ್ನ ಕ್ರೋಢೀಕರಿಸಲು ಅಧಿಕಾರಿಗಳಿಗೆ ಸಚಿವೆ ಸೂಚನೆ ನೀಡಿದರು.

ರಾಜ್ಯದ ಹಲವಾರು ಮುಜರಾಯಿ ದೇವಸ್ಥಾನಗಳ ಮೇಲೆ ಕರ್ನಾಟಕ ಸರಕಾರದ ನಾಮಫಲಕ ಇಲ್ಲ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ಮೇಲೆ ಮುಜರಾಯಿ ಇಲಾಖೆಯ ನಾಮಫಲಕಗಳನ್ನು ಅಳವಡಿಸುವುದು ಕಡ್ಡಾಯ ವಾಗಿದೆ. ಈ ನಿಟ್ಟಿನಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ತಪ್ಪದೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ಮತ್ತಷ್ಟು ಪ್ರವಾಸಿ ಸ್ನೇಹೀ ಮಾಢುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಗೊಳಿಸುವತ್ತ ಹೆಚ್ಚಿನ ಗಮನ ನೀಡಬೇಕು. ಮುಖ್ಯವಾಗಿ ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಚತೆ ಕಾಪಾಡುವುದು ಆದ್ಯತೆ ಆಗಬೇಕು. ರಾಜ್ಯದ 25 ಪ್ರಮುಖ ದೇವಸ್ಥಾನಗಳಲ್ಲಿ ತ್ಯಾಜ್ಯ ವಿಲೇವಾರಿ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಹೀಗೆ ಹಲವಾರು ವಿಷಯಗಳ ಬಗ್ಗೆ ಡಿಪಿಆರ್‌ ರಚಿಸಲು ಏಜೆನ್ಸಿಯನ್ನು ನೇಮಕ ಮಾಡಲಾಗಿದೆ. ಈ ಏಜೆನ್ಸಿ ಡಿಸೆಂಬರ್‌ ತಿಂಗಳಲ್ಲಿ 4 ದೇವಸ್ಥಾನಗಳ ಡಿಪಿಆರ್‌ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯದ ಒಟ್ಟಾರೆ ಕಲ್ಯಾಣಿಗಳಲ್ಲಿ ಸ್ವಚ್ಚವಾಗಿರುವ ಹಾಗೂ ಸ್ವಚ್ಚತೆ ಕಾಪಾಡದೇ ಇರುವ ಕಲ್ಯಾಣೀಗಳ ಪಟ್ಟಿಯನ್ನು ನೀಡುವಂತೆ ಆಯುಕ್ತರಿಗೆ ಸೂಚನೆ ನೀಡಿದರು. ಸ್ವಚ್ಚತೆಯನ್ನು ಕಾಪಾಡದೇ ಇರುವ ಕಲ್ಯಾಣೀಗಳ ಪುನರುಜ್ಜೀವನಕ್ಕೆ ಪಂಚಾಯತ್‌ ಇಲಾಖೆ ಸಹಯೋಗದಲ್ಲಿ ನರೆಗಾ ಮತ್ತು ಸ್ವಯಂ ಸೇವಾ ಸಂಘಟನೆಗಳನ್ನು ಬಳಸಿಕೊಳ್ಳುವಂತೆ ಸೂಚಿಸಿದರು.

ದೇವಸ್ಥಾನಗಳ ಜಾಗ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ದೇವಸ್ಥಾನಗಳ ಜಾಗ ಸಮೀಕ್ಷೆಗೆ ವಿಶೇಷ ಅಭಿಯಾನ ನಡೆಸಲು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಿದರು. ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನಗಳನ್ನ ಇನ್ನಷ್ಟು ಅಭಿವೃದ್ದಿಗೊಳಿಸುವ ಮತ್ತು ಪಾರದರ್ಶಕ ಆಡಳಿತ ಮಾಡುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು ಎಂದರು.

ಸಭೆಯಲ್ಲಿ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಆಯುಕ್ತೆ ರೋಹಿಣಿ ಸಿಂಧೂರಿ ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯರು ಮತ್ತು ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!