ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು – ಕೊರತೆ ಸಭೆಯನ್ನು ನ.20 ರಂದು ಆಯೋಜಿಲಾಗಿದೆ.
ವಿದ್ಯುತ್ ಗ್ರಾಹಕರ ಕುಂದು – ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎನ್.ರೋಹಿತ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದುಕೊರತೆ / ನ್ಯೂನತೆಗಳನ್ನು ಪರಸ್ಪರ ಚರ್ಚಿಸಿ ಸ್ನೇಹ ಪೂರ್ವಕವಾಗಿ ಬಗೆಹರಿಸಿಕೊಳ್ಳಲು, ಇಲಾಖೆ ಆದೇಶದ ಮೇರೆಗೆ ಪ್ರತಿ ತಿಂಗಳ 3ನೇ ಶನಿವಾರದಂದು ಸಭೆಯನ್ನು ನಡೆಸಲಾಗುತ್ತಿದೆ.
ಈ ನಿಟ್ಟಿನಲ್ಲಿ ನಗರ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ( o&M-1, o&M-2, ,ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆಯ ) ಸಾರ್ವಜನಿಕರು, ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…