ಬೆಂಗಳೂರು: ವಿಶ್ವ ಕ್ರಿಕೆಟ್ ದಿಗ್ಗಜರಲ್ಲಿ ಒಬ್ಬರೆನಿಸಿರುವ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ.
ಈ ಕುರಿತಂತೆ ಎಬಿ ಡಿವಿಲಿಯರ್ಸ್ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದು ಐಪಿಎಲ್ ಸಹಿತ ಉಳಿದ ಎಲ್ಲಾ ಕ್ರಿಕೆಟ್‍ನಿಂದಲೂ ನಿವೃತ್ತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ಮೂಲದ ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಈಗಾಗಲೇ ನಿವೃತ್ತಿಯನ್ನು ಪಡೆದಿದ್ದರು. ಆದರೆ ಲೀಗ್ ಕ್ರಿಕೆಟ್‍ಗಳ ಮೂಲಕ ಸಕ್ರಿಯವಾಗಿದ್ದು ಅಭಿಮಾನಿಗಳನ್ನು ರಂಜಿಸುತ್ತಿದ್ದರು.
ಕಳೆದ ಹಲವು ವರ್ಷಗಳಿಂದ ಆರ್ಸಿಬಿ ತಂಡದ ಪರವಾಗಿ ಐಪಿಎಲ್‍ನಲ್ಲಿ ಆಡುತ್ತಿದ್ದ ಎಬಿ ಡಿವಿಲಿಯರ್ಸ್ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದ್ದಾರೆ.
ಇದೊಂದು ಅದ್ಭುತವಾದ ಪ್ರಯಾಣವಾಗಿದ್ದು ಈಗ ನಾನು ಎಲ್ಲಾ ಮಾದರಿಯ ಕ್ರಿಕೆಟ್‍ಗೂ ನಿವೃತ್ತಿಯನ್ನು ಘೋಷಿಸುತ್ತಿದ್ದೇನೆ ಎಂದು ಎಬಿ ಡಿವಿಲಿಯರ್ಸ್ ಘೋಷಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….