ದೊಡ್ಡಬಳ್ಳಾಪುರ: ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಮನೆ ಕುಸಿದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಅದರಲ್ಲಿದ್ದ ಕುಟುಂಬ ಅಪಾಯದಿಂದ ಪಾರಾಗಿದೆ.
ತಿಪ್ಪೂರು ಗ್ರಾಮದ ವೆಂಕಟೇಶ್ ಗೌಡ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಕಳೆದ ಹಲವು ದಿನಗಳಿಂದ ಸುರಿದ ಮಳೆಯಿಂದ ಗುರುವಾರ ರಾತ್ರಿ ಗೋಡೆಗಳು, ಮೇಲ್ಛಾವಣಿ ಕುಸಿದು ಬಿದ್ದಿದೆ.
ಏಳು ಮಂದಿಯ ಕುಟುಂಬ ಇದೇ ಮನೆಯಲ್ಲಿ ರಾತ್ರಿ ಮಲಗಿದ್ದರು ಎನ್ನಲಾಗಿದ್ದು, ಮುಂಭಾದ ಗೋಡೆ ಕುಸಿದ ಶಬ್ದಕ್ಕೆ ಮನೆಯಿಂದ ಹೊರಗೋಡಿ ಬಂದು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.
ಮನೆ ಕುಸಿದು ಬಿದ್ದಿರುವ ಕಾರಣ ಬಡ ಕುಟುಂಬ ಸಂಭಂಧಿಕರ ಮನೆಯಲ್ಲಿ ಆಶ್ರಯ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ತಾಲೂಕು ಆಡಳಿತ, ಗ್ರಾಮ ಪಂಚಾಯಿತಿಯ ಅಥವಾ ದಾನಿಗಳು ನೆರವಾಗಬೇಕೆಂದು ಬಡ ಕುಟುಂಬ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….