ಹೊಸದಿಲ್ಲಿ: ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಗೊಳಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ.
ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸರ್ಕಾರ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಒಪ್ಪಿಕೊಂಡಿದ್ದಾರೆ.
ಈ ತಿಂಗಳ ಸಂಸತ್ ಅಧಿವೇಶನದಲ್ಲಿ ಮೂರು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನಿಜವಾದ ಮತ್ತು ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ. ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ನಾವು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸುತ್ತೇವೆ” ಎಂದು ಪ್ರಧಾನಿ ಮೋದಿ ಹೇಳಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……