ದೊಡ್ಡಬಳ್ಳಾಪುರ: ತಾಲೂಕಿನ ಕುಂಬಾರಪೇಟೆಯಲ್ಲಿನ ಮನೆಗೆ ಆಕಸ್ಮಿಕ ಬೆಂಕಿ ತಗುಲಿ, ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ಅಲ್ಲಾ ಭಕಾಷ್ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಬಾಡಿಗೆ ನೀಡಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ಸಂಭವಿಸಿದೆ.
ಮನೆಗೆ ಬೆಂಕಿ ತಗುಲಿರುವುದನ್ನು ನೋಡಿದ ಸ್ಥಳೀಯರು, ಅಗ್ನಿಶಾಮಕ ದಳ ಹಾಗು ಪೋಲಿಸ್ ಠಾಣೆಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…