ದಿನ ಭವಿಷ್ಯ: ಶನಿವಾರ , ನವೆಂಬರ್ 20, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದಾರೆ

ಮೇಷ: ಈ ರಾಶಿಯ ಮಹಿಳೆಯರಿಗೆ ಇಂದು ಅನಗತ್ಯವಾಗಿ ಅಪವಾದಗಳನ್ನು ಎದುರಿಸುವ ಸಂದರ್ಭಗಳು ಎದುರಾದೀತು. ತಾಳ್ಮೆ, ಸಂಯಮ ಅಗತ್ಯ. ಹಿಂದೆ ಹೂಡಿದ್ದ ಬಂಡವಾಳಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕಿರು ಸಂಚಾರ ಮಾಡುವ ಸಾಧ್ಯತೆ.

ವೃಷಭ: ಈ ರಾಶಿಯವರು ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಬಹುದಿನಗಳಿಂದ ಬಯಸಿದ್ದ ವಸ್ತು ಕೈ ಸೇರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಮುನ್ನಡೆ ಅನುಭವಿಸಲಿದ್ದೀರಿ.

ಮಿಥುನ: ಈ ರಾಶಿಯವರು ಎಷ್ಟೇ ಅಭಿವೃದ್ಧಿ
ಯಾಗಬೇಕೆಂದು ಯೋಚಿಸಿದರೂ ಒಂದೊಂದೇ ಸಮಸ್ಯೆಗಳು ಹೈರಾಣಾಗಿಸಲಿದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರೋಗ್ಯ ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ಕಟಕ: ಈ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವಿನಾಕಾರಣ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಈ ರಾಶಿಯವರು ವೃತ್ತಿ ಮಾತ್ಸರ್ಯದಿಂದ ಅಂದುಕೊಂಡ ಸ್ಥಾನ ಮಾನ ಸ್ವಲ್ಪದರಲ್ಲೇ ಕೈ ತಪ್ಪಿ ಹೋಗಬಹುದು. ಮನಸ್ಸಿನ ನೆಮ್ಮದಿಗಾಗಿ ದೇವಾಲಯ ಸಂದರ್ಶಿಸಲಿದ್ದೀರಿ.

ಕನ್ಯಾ: ಈ  ರಾಶಿಯವರು ಅನಿರೀಕ್ಷಿತ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾದ ಸಂದರ್ಭ ಬರಲಿದೆ. ಇಷ್ಟ ಮಿತ್ರರ ಭೇಟಿಯಾಗಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಪ್ರೀತಿ ಪಾತ್ರರ ಕಷ್ಟಗಳಿಗೆ ನೆರವಾಗಲಿದ್ದೀರಿ.

ತುಲಾ: ಈ ರಾಶಿಯವರು ಹೊಸ ಬಗೆಯ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ‍್ನಗಳು ತೋರಿಬಂದರೂ ಅಂತಿಮವಾಗಿ ಕೆಲಸ ಮುಂದುವರಿಯಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಈ ರಾಶಿಯವರು ಇಂದು  ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದ್ದು, ಮನಸ್ಸಿಗೆ ಸಂತೋಷವಾಗುವುದು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ.

ಧನಸ್ಸು: ಈ ರಾಶಿಯವರು ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ.

ಮಕರ: ಈ ರಾಶಿಯವರ ಬಹುದಿನಗಳ ಕನಸು ನನಸು ಮಾಡಲು ಮುಂದಾಗಲಿದ್ದಾರೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆಯಿದೆ.

ಕುಂಭ: ಈ ರಾಶಿಯವರು ಕೌಟುಂಬಿಕವಾಗಿ ಸಮಸ್ಯೆಗಳನ್ನು ಸಂಗಾತಿಯೊಂದಿಗೆ ಪರಾಮರ್ಶಿಸಿ ಪರಿಹರಿಸಲಿದ್ದೀರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಮೀನ: ಈ ರಾಶಿಯ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಕಾರ್ಯರಂಗದಲ್ಲಿ ಆಪ್ತರ ಸಹಾಯ ದೊರೆಯಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ

ಆಯನ:
ದಕ್ಷಿಣಾಯನ

ಋತು:
ಶರದ್ ಋತು

ಮಾಸ:
ಕಾರ್ತಿಕ ಮಾಸ

ಪಕ್ಷ:
ಕೃಷ್ಣ ಪಕ್ಷ      

ತಿಥಿ:
ಪಾಡ್ಯಮಿ

ನಕ್ಷತ್ರ:
ರೋಹಿಣಿ ನಕ್ಷತ್ರ


ರಾಹುಕಾಲ:
09:16 ರಿಂದ 10:43

ಗುಳಿಕಕಾಲ:
06:23 ರಿಂದ 07:50

ಯಮಗಂಡಕಾಲ: 
01:36 ರಿಂದ 03:02

ಈ ದಿನದ ವಿಶೇಷ: ಹುತ್ತರಿ ಹಬ್ಬ

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!