
ಬೆಂ.ಗ್ರಾ.ಜಿಲ್ಲೆ: ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ 2021-22ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಆಹ್ವಾನಿಸಲಾಗಿದ್ದ ಅರ್ಜಿಯ ಸಲ್ಲಿಸುವ ಅವಧಿಯನ್ನು 2021ರ ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ವೆಬ್‌ಸೈಟ್ http://scholarships.gov.in ನಲ್ಲಿ ಆನ್‌ಲೈನ್ ಮೂಲಕ 2021ರ ನವೆಂಬರ್ 30 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ನಂ. 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						