ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಮಂಡಳಿಗೆ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ 11ಗಂಟೆ ವರದಿಯನ್ವಯ ಶೇ.9.88 ಮತದಾನವಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಮಂಡಳಿಗೆ ನಡೆಯುವ ಚುನಾವಣೆಗೆ ತಾಲೂಕಿಗೆ ಸಂಬಂಧಿಸಿದಂತೆ ತಾಲೂಕು ಕಚೇರಿಯಲ್ಲಿ ಎರಡು ಹಾಗೂ ಮಧುರೆಯಲ್ಲಿ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ.
ತಾಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಎರಡು ಮತಗಟ್ಟೆಯಲ್ಲಿ ನಗರಸಭೆ, ಕಸಬಾ ದೊಡ್ಡಬೆಳವಂಗಲ, ತೂಬಗೆರೆ ಹೋಬಳಿಯ 141 ಮತದಾರರು ಮತ ಚಲಾಯಿಸಿದ್ದರೆ, ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮಧುರೆ ಹೋಬಳಿಯ 90 ಮಂದಿ ಮತದಾರರು ಸೇರಿ ಒಟ್ಟು 231 ಮಂದಿ ಮತ ಚಲಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……