ದಿನ ಭವಿಷ್ಯ: ಭಾನುವಾರ, ನವೆಂಬರ್ 21, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯ ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ

ಮೇಷ: ಈ ರಾಶಿಯವರು ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಾದೀತು. ಹಳೆಯ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದೆ. ಚಿಂತೆ ಬೇಡ.

ವೃಷಭ: ಈ ರಾಶಿಯವರು ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ಮಿಥುನ: ಈ ರಾಶಿಯವರು ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಆಪ್ತರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕಟಕ: ಈ ರಾಶಿಯವರು ಮನಸ್ಸು ಬಯಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನೆಮ್ಮದಿ ಕಾಣಲಿದ್ದೀರಿ. ಉದ್ಯೋಗ ಬದಲಾವಣೆ ಪ್ರಯತ್ನಕ್ಕೆ ತಕ್ಕ ಮಟ್ಟಿಗಿನ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಸಿಂಹ: ಈ ರಾಶಿಯವರು ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹೊಸ ಹೊಣೆಗಾರಿಕೆಗಳಿಗೆ ಸಿದ್ಧರಾಗಿ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿದ್ದು, ಸಂಗಾತಿಯ ಪ್ರೀತಿ ಸಿಗಲಿದೆ. ತಾಳ್ಮೆ, ಸಂಯಮವಿರಲಿ.

ಕನ್ಯಾ: ಈ ರಾಶಿಯವರು ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವರು. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ಈ ರಾಶಿಯವರಿಗೆ ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಭೂಮಿ, ವಾಹನ ಖರೀದಿಯಲ್ಲಿ ಲಾಭವಾದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ವೃಶ್ಚಿಕ: ಈ ರಾಶಿಯವರು ವಾಸ್ತವ ಸ್ಥಿತಿ ಅರಿತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುವುದು. ಸಂಗಾತಿಯ ಮಾತುಗಳು ಹಿತವೆನಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಧನಸ್ಸು: ಈ ರಾಶಿಯವರು ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಸಂತೋಷ ಸಿಗುವುದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.

ಮಕರ: ಈ ರಾಶಿಯವರು ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಎದುರಾದೀತು. ಹೊಸ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಈ ರಾಶಿಯವರು ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಕೆಲಸ ಕಾರ್ಯಗಳಲ್ಲಿ ಸಫಲತೆ ಕಂಡುಬರಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಈ ರಾಶಿಯವರು ಬಹುದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು. ಮಕ್ಕಳ ಸಂತೋಷಕ್ಕಾಗಿ ಪ್ರಯಾಣ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ:
ದಕ್ಷಿಣಾಯನ

ಋತು:
ಶರದ್ ಋತು

ಮಾಸ:
ಕಾರ್ತಿಕ ಮಾಸ

ಪಕ್ಷ:
ಕೃಷ್ಣ ಪಕ್ಷ      

ತಿಥಿ:
ದ್ವಿತೀಯ

ನಕ್ಷತ್ರ:
ಮೃಗಶಿರಾ ನಕ್ಷತ್ರ


ರಾಹುಕಾಲ:
04:29 ರಿಂದ 05:55

ಗುಳಿಕಕಾಲ:
03:02 ರಿಂದ 04:29

ಯಮಗಂಡಕಾಲ:
12:09 ರಿಂದ 01:36

ಈ ದಿನದ ವಿಶೇಷ: ನಂಜನಗೂಡು ಶ್ರೀಕಂಠೇಶ್ವರ  ತ್ರಿರಥ (ಚಿಕ್ಕ ಜಾತ್ರೆ )

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಿನ್ನೆಯಷ್ಟೇ ನೇಕಾರರ (Weavers) ಭವನ ಶಂಕುಸ್ಥಾಪನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮವನ್ನೆ ಸೃಷ್ಟಿಸಿ ತಣ್ಣಗಾಗಿದೆ.

[ccc_my_favorite_select_button post_id="118262"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!