ಬೆಂ.ಗ್ರಾ.ಜಿಲ್ಲೆ ಕಸಾಪ ಚುನಾವಣೆ: ಗೆಲುವಿನ ನಗೆ ಬೀರಿದ ಬಿ.ಎನ್.ಕೃಷ್ಣಪ್ಪ / ಕೃಷ್ಷಪ್ಪರ ಗೆಲುವಿಗೆ ಅವಿರತ ಶ್ರಮಿಸಿ ಗೆದ್ದ ಸಮಾನ ಮನಸ್ಕರು

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಬಿ.ಎನ್.ಕೃಷ್ಣಪ್ಪ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ವಿಜಯಪುರ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಕನಸವಾಡಿ ಮತಗಟ್ಟೆಗಳಲ್ಲಿ ಭಾನುವಾರ ಸಾಹಿತ್ಯ ಪ್ರೇಮಿಗಳು ಉತ್ಸಾಹದಿಂದ ಸಾಲುಗಟ್ಟಿ ಮತದಾನ ಮಾಡಿದರು.

ಚುನಾವಣೆಯಲ್ಲಿ ಬಿ.ಎನ್.ಕೃಷ್ಣಪ್ಪ, ಮಹಾಲಿಂಗಯ್ಯ, ಲಕ್ಷ್ಮೀಶ್ರೀನಿವಾಸ್, ನಿಕಟ ಪೂರ್ವ ಅಧ್ಯಕ್ಷ ಚಿ.ಮಾ.ಸುಧಾಕರ್ ಕಣದಲ್ಲಿದ್ದರು.

ಕಳೆದ ಒಂದು ತಿಂಗಳಿಂದ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ, ಕಸಾಪದಲ್ಲಿ ಬದಲಾವಣೆ ಬಯಸಿದ್ದ ಸಮಾನ ಮನಸ್ಕರ ತಂಡದ ಅವಿರತ ಶ್ರಮ ಹಾಗೂ ಪ್ರಾಂಶುಪಾಲರಾಗಿ, ಸಾಹಿತಿಗಳಾಗಿ ಕರ್ತವ್ಯ ನಿರ್ವಹಿಸಿ, ಅಪಾರ ಪ್ರಮಾಣದ ಶಿಷ್ಯ ವೃಂದವನ್ನು ಹೊಂದಿದ್ದ ಕಾರಣ ಬಿ.ಎನ್.ಕೃಷ್ಣಪ್ಪ ಅವರು ಚುನಾಯಿತರಾಗಿದ್ದಾರೆ ಎನ್ನಲಾಗಿದೆ.

ಮರು ಆಯ್ಕೆ ಬಯಸಿದ್ದ ನಿಕಟ ಪೂರ್ವ ಅಧ್ಯಕ್ಷ ಚಿ.ಮಾ.ಸುಧಾಕರ್ ಅವರು, ಬಿ.ಎನ್.ಕೃಷ್ಣಪ್ಪ ಹಾಗೂ ಸಮಾನ ಮನಸ್ಕರ ಅಬ್ಬರದ ಪ್ರಚಾರದ ನಡುವೆ ಮಂಕಾಗಿದ್ದಾರೆ.

ಸ್ಪರ್ಧೆಯಲ್ಲಿ ನಾಲ್ಕು ಮಂದಿ ಇದ್ದರೂ, ಮೂರು ಮಂದಿ ಅಭ್ಯರ್ಥಿಗಳ ನಡುವೆ ಪ್ರಬಲ ಪೈಪೋಟಿಯಿತ್ತು. ಕೊನೆಗೂ ಇಬ್ಬರನ್ನು ಮಣಿಸುವಮೂಲಕ  ಸಾಹಿತ್ಯ ಪರಿಷತ್ ನೂತನ ಸಾರಥಿಯಾಗಿ ಕೃಷ್ಣಪ್ಪ ಹೊರಹೊಮ್ಮಿದ್ದಾರೆ.

ಜಿಲ್ಲೆಯಲ್ಲಿ 7416 ಮತದಾರರ ಪೈಕಿ 4383 ಮಂದಿ ಮತಚಲಾವಣೆ ಮಾಡಿದ್ದಾರೆ. ಶೇ 58.49 ರಷ್ಟು ಮತದಾನವಾಗಿದೆ. 

ದೊಡ್ಡಬಳ್ಳಾಪುರ: 1559, ದೇವನಹಳ್ಳಿ: 1730, ಹೊಸಕೋಟೆ: 510, ನೆಲಮಂಗಲ: 584 ಮಂದಿ ಮತ ಚಲಾಯಿಸಿದ್ದರು.

ನೂತನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಇದು ಕನ್ನಡಮ್ಮನ ಸೇವೆಗಾಗಿ ಸಿಕ್ಕಿರುವ ಅವಕಾಶ. ಪರಾಜಿತ ಅಭ್ಯರ್ಥಿಗಳನ್ನು ಕಡೆಗಣಿಸದೆ, ಅವರ ಸಲಹೆ ಸೂಚನೆ ಪಡೆದು, ಸಾಹಿತ್ಯ ಪರಿಷತ್‌ನ ಅಭಿವೃದ್ಧಿಗೆ ಶ್ರಮಿಸುತ್ತೇನೆ.  ಪ್ರತಿಯೊಂದು ತಾಲ್ಲೂಕಿನಲ್ಲೂ ಕನ್ನಡ ಸಾಹಿತ್ಯ ಪರಿಷತ್ತಿನ ಭವನಗಳ ನಿರ್ಮಾಣ ಸೇರಿದಂತೆ, ಚುನಾವಣಾ ಪೂರ್ವದಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಗ್ರಾಮೀಣ ಯುವ ಸಾಹಿತಿಗಳಿಗೆ ಕಾವ್ಯಕಮ್ಮಟ ಆಯೋಜಿಸಿ, ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ರಾಜ್ಯಾಧ್ಯಕ್ಷರ ಗಮನಸೆಳೆಯುತ್ತೇನೆ ಎಂದರು.

ನಿಕಟ ಪೂರ್ವ ಅಧ್ಯಕ್ಷ ಚಿ.ಮಾ.ಸುಧಾಕರ್ ಮಾತನಾಡಿ, ಚುನಾವಣೆಯಲ್ಲಿ ಸೋಲು ಕಂಡಿರುವುದಕ್ಕೆ ಬೇಸರವಿಲ್ಲ. ಸಾಹಿತ್ಯ ಪ್ರೇಮಿಗಳು ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಹಿಂದಿನ ಸಾಲಿನಲ್ಲಿ ನನಗೆ ನೀಡಿದ್ದ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಉತ್ತಮವಾದ ಕಾರ್ಯಕ್ರಮಗಳನ್ನು ಮಾಡಿದ್ದೇವೆ. ನೂತನ ಜಿಲ್ಲಾಧ್ಯಕ್ಷರು, ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳನ್ನು ಉತ್ತಮವಾಗಿ ಮುಂದುವರೆಸಿಕೊಂಡು ಹೋಗಲಿದ್ದಾರೆ ಎಂದು ಅವರಿಗೆ ಶುಭಹಾರೈಸುತ್ತೇನೆ ಎಂದಿದ್ದಾರೆ.

ಕೃಷ್ಣಪ್ಪರ ಗೆಲುವಿನ ಹಿನ್ನಲೆಯಲ್ಲಿ ಸಮಾನ ಮನಸ್ಕರ ತಂಡ ದೊಡ್ಡಬಳ್ಳಾಪುರದಲ್ಲಿ ಸಂಭ್ರಮಾಚರಣೆ ಮಾಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!