ಮಂಗಳೂರು: 8 ವರ್ಷದ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ಭಾನುವಾರ ಸಂಜೆ ಬೆಳಕಿಗೆ ಬಂದಿದೆ.
ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಬಾಲಕಿಯನ್ನು ಯಾರು ಹತ್ಯೆ ಮಾಡಿದ್ದಾರೆ ಎನ್ನುವ ಬಗ್ಗೆ ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಕಾರ್ಖಾನೆಯ ಕಾರ್ಮಿಕರೇ ಈ ಕೃತ್ಯ ನಡೆಸಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದು ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆಂದು ಕೋಸ್ಟಲ್ ಮಿರರ್ ವರದಿ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……