ಆರ್ಥಿಕ ನಷ್ಟ ಅಂದಾಜಿಸಲು ಸಮೀಕ್ಷೆ ನಡೆಸಿ, ಸಮಗ್ರ ವರದಿ ನೀಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂ.ಗ್ರಾ.ಜಿಲ್ಲೆ: ವ್ಯಾಪಕ ಮಳೆಯಿಂದಾಗಿ ಹಲವು ಬೆಳೆಗಳು ಹಾಗೂ ಮನೆಗಳು ಹಾನಿಯಾಗಿದ್ದು, ಆರ್ಥಿಕ ನಷ್ಟವನ್ನು ಅಂದಾಜಿಸುವ ಸಂಬಂಧ ಸಮೀಕ್ಷೆಯನ್ನು ನಡೆಸಿ, ಸಮಗ್ರ ವರದಿಯನ್ನು ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ತೆರಳುವ ವೇಳೆ, ಮಾರ್ಗ ಮಧ್ಯದಲ್ಲಿ ಹೊಸಕೋಟೆ ನಗರಸಭೆ ವ್ಯಾಪ್ತಿಯಲ್ಲಿರುವ ಮಳೆಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ,‌ ಪರಿಶೀಲನೆ ನಡೆಸಿ, ಮಾತನಾಡಿದ ಅವರು, ಸ್ಪಷ್ಟವಾದ ವರದಿ ಬಂದ ನಂತರ ಎಷ್ಟು ಪರಿಹಾರ ನೀಡಬೇಕೆಂದು ನಿರ್ಧರಿಸಿ, ಆದ್ಯತೆ ಮೇರೆಗೆ ಅನುದಾನ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು ಎಂದರು.

ಹಲವೆಡೆ ಕೃಷಿ ಪ್ರದೇಶಗಳು ನೀರಿನಿಂದ ಮುಳುಗಡೆಯಾಗಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದರಲ್ಲದೆ ಪೂರ್ಣ ಪ್ರಮಾಣದಲ್ಲಿ ಕುಸಿದ ಮನೆಗಳು ಹಾಗೂ ಭಾಗಶಃ ಕುಸಿದು ಬಿದ್ದ ಮನೆಗಳಿಗೆ ಹಾನಿಗನುಸಾರವಾಗಿ ಪರಿಹಾರವನ್ನು ಅಧಿಕಾರಿಗಳು ನೀಡಬೇಕು ಎಂದು ತಿಳಿಸಿದರು.

ಅತಿವೃಷ್ಠಿ ಪರಿಹಾರ ಕಾರ್ಯಕ್ಕೆ ವೇಗವನ್ನು ನೀಡಲು ಚುನಾವಣಾ ನೀತಿ ಸಂಹಿತೆಯಲ್ಲಿ ರಿಯಾಯಿತಿ ನೀಡಲು ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆಯಲಾಗಿದ್ದು,  ಸಚಿವರು ಮಳೆಬಾಧಿತ ಪ್ರದೇಶಗಳಲ್ಲಿನ ಜನರ ಕಷ್ಟಗಳನ್ನು ಆಲಿಸುವುದರ ಜೊತೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.), ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಡಿ.ಕೆ. ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು, ಜಾತಿ ಮತ್ತು ಧರ್ಮಗಳ ನಡುವೆ ಒಡಕುಂಟು ಮಾಡುವ ನಾಯಕರ ಬದಲು ಇಂತಹ ನಾಯಕರ ಅಗತ್ಯ; ರಂಭಾಪುರಿ ಶ್ರೀ

ಡಿ.ಕೆ. ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು, ಜಾತಿ ಮತ್ತು ಧರ್ಮಗಳ ನಡುವೆ ಒಡಕುಂಟು

ಕನಕಪುರ: “ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ (D.K.Shivakumar) ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು

[ccc_my_favorite_select_button post_id="110652"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!