ದೊಡ್ಡಬಳ್ಳಾಪುರ: ಸ್ಥಳೀಯ ಸಂಸ್ಥೆಗಳಿಂದ ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಕ್ಷೇತ್ರದಿಂದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ಸಿ.ನಾರಾಯಣಸ್ವಾಮಿ ಅವರು ನ.23 ರಂದು ನಾಮ ಪತ್ರ ಸಲ್ಲಿಸಲಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದ ಬಿ.ಸಿ.ನಾರಾಯಣಸ್ವಾಮಿ ಅವರು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ, ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಹಾಗೂ ಪ್ರಸ್ತುತ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಬಿ.ಸಿ.ನಾರಾಯಣಸ್ವಾಮಿ ಅವರು ಪಕ್ಷದ ವರಿಷ್ಠರು ಮಾಹಿತಿ ನೀಡಿದ್ದು ನ.23 ರಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಧ್ಯಾಹ್ನ 12 ಗಂಟೆಗೆ ನಾಮ ಪತ್ರಸಲ್ಲಿಸಲು ಸೂಚನೆ ನೀಡಿದ್ದಾರೆ. ಹೀಗಾಗಿ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಈ ಹಿಂದೆ ವಿಧಾನ ಪರಿಷತ್ ಸ್ಥಾನಕ್ಕೆ ಹೊಸಕೋಟೆ ಬಿ.ಎಂ.ನಾರಾಯಣಸ್ವಾಮಿ ಅವರ ಹೆಸರನ್ನು ಘೋಷಣೆ ಮಾಡಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……