ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 10 ಮಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ರೂ 1.52 ಕೋಟಿ ಮೌಲ್ಯ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ನವೆಂಬರ್ 20 ರಂದು ನಗರದ ನಿಲ್ದಾಣಕ್ಕೆ ಬರುತ್ತಿದ್ದ ಕೆಲ ಪ್ರಯಾಣಿಕರು ಚಿನ್ನ ಸಾಗಿಸುತ್ತಿದ್ದ ಮಾಹಿತಿ ಲಭ್ಯವಾಗಿತ್ತು. ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಡೆದು ಪರಿಶೀಲನೆ ನಡೆಸಿದಾಗ ಗುದದ್ವಾರದಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ.
ಖಚಿತವಾದ ಮಾಹಿತಿಯ ಮೇರೆಗೂ ಬ್ಯಾಗ್ ಹಾಗೂ ಬಟ್ಟೆಗಳಲ್ಲಿ ಹುಡುಕಾಡಿದರೂ ಚಿನ್ನ ಪತ್ತೆಯಾಗಿರಲಿಲ್ಲ. ಪ್ರತ್ಯೇಕ ಕೊಠಡಿಗೆ ಕರೆದೊಯ್ದು ಲೋಹ ಶೋಧಕದಿಂದ ತಪಾಸಣೆ ನಡೆಸಿದಾಗ 10 ಪ್ರಯಾಣಿಕರ ಬಳಿ ಚಿನ್ನವಿರುವ ಸುಳಿವು ಗೊತ್ತಾಯಿತು ಎಂದು ಮೂಲಗಳು ತಿಳಿಸಿವೆ.
ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗರುವ ಶಂಕೆಯಿದ್ದು, ತನಿಖೆ ಮುಂದುವರಿಸಲಾಗಿದೆ ಎಂದೂ ಕಸ್ಟಮ್ಸ್ ಮೂಲಗಳು ಹೇಳಿವೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……