ಮೇಷ: ಈ ರಾಶಿಯವರು ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ವೃಷಭ: ಈ ರಾಶಿಯವರು ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ದೊರಕಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಿಥುನ: ಈ ರಾಶಿಯವರು ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ. ವೃತ್ತಿರಂಗದಲ್ಲಿ ಸ್ಥಾನ ಮಾನ ಸುಧಾರಣೆಗೆ ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.
ಕಟಕ: ಈ ರಾಶಿಯವರು ಕೌಟುಂಬಿಕವಾಗಿ ನಡೆಸುವ ಕೆಲವೊಂದು ನಿರ್ಧಾರಗಳು ವೈಯಕ್ತಿಕವಾಗಿ ಕಿರಿ ಕಿರಿಯೆನಿಸೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.
ಸಿಂಹ: ಈ ರಾಶಿಯವರು ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ.
ಕನ್ಯಾ: ಈ ರಾಶಿಯವರ ದೂರ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆಪ್ತರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ.
ತುಲಾ: ಈ ರಾಶಿಯವರು ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸಲು ಸಕಾಲ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಾತಿನ ಮೇಲೆ ಸಂಯಮವಿರಲಿ. ದೇವತಾ ಪ್ರಾರ್ಥನೆ ಮಾಡಿ.
ವೃಶ್ಚಿಕ: ಈ ರಾಶಿಯವರಿಗೆ ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ. ಆಕಸ್ಮಿಕ ದೂರ ಪ್ರಯಾಣ
ಧನಸ್ಸು: ಈ ರಾಶಿಯವರು ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ನೆಂಟರಿಷ್ಟರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಕರ: ಈ ರಾಶಿಯವರು ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ.
ಕುಂಭ: ಈ ರಾಶಿಯವರ ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಬೆಲೆ ಕೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.
ಮೀನ: ಈ ರಾಶಿಯವರು ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಜನರ ಭೇಟಿಯಿಂದ ಕಾರ್ಯಸಾಧನೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.
ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ
ಆಯನ: ದಕ್ಷಿಣಾಯನ
ಋತು: ಶರದ್ ಋತು
ಮಾಸ: ಕಾರ್ತಿಕ ಮಾಸ
ಪಕ್ಷ: ಕೃಷ್ಣ ಪಕ್ಷ
ತಿಥಿ: ಚತುರ್ಥಿ
ನಕ್ಷತ್ರ: ಆರಿದ್ರ ನಕ್ಷತ್ರ
ಈ ದಿನದ ವಿಶೇಷ: ಶ್ರೀ ಸಂಕಷ್ಟಹರ ಗಣಪತಿ ಪೂಜೆ (ಚಂದ್ರೋದಯ ರಾತ್ರಿ 09:08)
ರಾಹುಕಾಲ: 03:02 ರಿಂದ 04:28
ಗುಳಿಕಕಾಲ: 12:09 ರಿಂದ 1:36
ಯಮಗಂಡಕಾಲ: 09:17 ರಿಂದ 10:43
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……