ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ-17 ರಿಂದ ರಾಜ್ಯ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು, ಕೊನೆಯ ದಿನವಾದ ಇಂದು(23-11-2021) ಐದು ನಾಮಪತ್ರಗಳು ಸಲ್ಲಿಕೆಯಾಗಿವೆ.
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ.ಸಿ.ನಾರಾಯಣಸ್ವಾಮಿ ಅವರು ಎರಡು ನಾಮಪತ್ರಗಳು ಹಾಗೂ ಜನತಾದಳ(ಜಾತ್ಯತೀತ) ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ರಮೇಶ್‌ಗೌಡ ಅವರು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಎಸ್.ರವಿ ಅವರು ಒಂದು ನಾಮಪತ್ರ, ಜನತಾದಳ(ಜಾತ್ಯತೀತ) ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ರಮೇಶ್‌ಗೌಡ ಅವರು ನಾಲ್ಕು ನಾಮಪತ್ರ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ.ಸಿ.ನಾರಾಯಣಸ್ವಾಮಿ ಅವರು ಎರಡು ನಾಮಪತ್ರಗಳು ಸೇರಿದಂತೆ ಇದುವರೆಗೆ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ.
2021ರ ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ನವೆಂಬರ್ 26 ಕೊನೆಯ ದಿನವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……