ಕಾಂಪ್ಲೆಕ್ಸ್ ಬಳಕೆಗೆ ಹೆಚ್ಚಿನ ಗಮನ ನೀಡುವಂತೆ ಕ್ರಮ: ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಸಹ ಬಿತ್ತನೆ ಹೆಚ್ಚಾಗಿದ್ದು, ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಬಳಕೆ ಮಾಡದಂತೆಯೂ ಮೂಲಗೊಬ್ಬರವಾದ ಕಾಂಪ್ಲೆಕ್ಸ್ ಗೊಬ್ಬರ ಬಳಕೆಯತ್ತವೂ ರೈತರು ಹೆಚ್ಚಿನ ಗಮನ ನೀಡುವಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರೊಂದಿಗೆ ನಡೆದ ರಸಗೊಬ್ಬರ ಸರಬರಾಜು ಸಂಬಂಧ ವಿಡಿಯೋ ಸಂವಾದವನ್ನುದ್ದೇಶಿಸಿ ಅವರು ಮಾತನಾಡಿದರು.

ಡಿಎಪಿ ಬದಲಾಗಿ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆಗೆ ಈಗಾಗಲೇ ಎಲ್ಲಾ ರೈತ ಸಪರ್ಕ ಕೇಂದ್ರಗಳು ಹಾಗೂ ಮಾರಾಟಗಾರರಿಗೆ ಅಗತ್ಯ ತರಬೇತಿ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಡಿಎಪಿ ಬದಲಿಗೆ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ರೈತರು ಬಳಸಲು ಪ್ರಚಾರ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೇ ರಾಜ್ಯಕ್ಕೆ ಕೇಂದ್ರದಿಂದ ಹಂಚಿಕೆಯಾದ 5 ಲಕ್ಷ ಬಾಟಲ್ ನ್ಯಾನೋ ಯೂರಿಯಾದಲ್ಲಿ ಈಗಾಗಲೇ 3 ಲಕ್ಷ ಬಾಟಲ್ ನ್ಯಾನೋ ಯೂರಿಯಾ ಬಳಕೆಯಾಗಿದ್ದು, ಅಂದಾಜು 16 ಸಾವಿರ ಮೆ.ಟನ್ ರಸಗೊಬ್ಬರ ಈ ನ್ಯಾನೋ ಯೂರಿಯಾ ಬಳಕೆಯಿಂದ ಉಳಿತಾಯವಾಗಿದೆ ಎಂಬುದನ್ನು ಕೇಂದ್ರಕ್ಕೆ ಸಚಿವರು ವಿವರಿಸಿದರು.

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ ರೈತರಿಗೆ ಕೊರತೆಯಾಗದಂತೆ ಈ ಹಿಂದಿನಿಂದಲೂ ಸಮರ್ಪಕವಾದ ರೀತಿಯಲ್ಲಿ ರಸಗೊಬ್ಬರವನ್ನು ಪೂರೈಸುತ್ತಿದ್ದು, ಈ ಬಾರಿಯೂ ಬಿತ್ತನೆ ಹೆಚ್ಚಾಗಿರುವುದರಿಂದ ರಸಗೊಬ್ಬರಕ್ಕೆ ಬೇಡಿಕೆಯೂ ಹೆಚ್ಚಾಗಿದೆ. ರೈತರ ಬೇಡಿಕೆಯನುಸಾರ ಕೇಂದ್ರಕ್ಕೆ ರಸಗೊಬ್ಬರ ಪೂರೈಸುವಂತೆ ಮನವಿ ಮಾಡಲಾಗುತ್ತಿದೆ. ಬೀಳು ಭೂಮಿಯಲ್ಲಿಯೂ ಸಹ ಬೆಳೆ ತೆಗೆಯುವ ಭರವಸೆ ರೈತ ಸಮುದಾಯದಲ್ಲಿ ಪ್ರಸಕ್ತ ಮಳೆ ಮೂಡಿಸಿದ್ದು, ಮಳೆಯಾಶ್ರಿತ ಬೆಳೆಗಳಿಗೆ ಪ್ರಮುಖ ರಸಗೊಬ್ಬರ ಮೂಲಗಳಾದ ಡಿಎಪಿ ಮತ್ತು ಯೂರಿಯಾ ರಸಗೊಬ್ಬರಗಳ ಬೇಡಿಕೆಯನ್ನು ಹೆಚ್ಚಿಸಿದೆ. ರಸಗೊಬ್ಬರ ಬೇಡಿಕೆಯನುಸಾರ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಪೂರೈಸುತ್ತಿದೆ.

ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಗುರಿಗಿಂತ ಹೆಚ್ಚಿನ ಅಂದರೆ 78.51 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದ್ದು, ಮುಂಗಾರುಹಂಗಾಮಿನಲ್ಲಿ ಬೇಡಿಕೆಯಿದ್ದ ವಿವಿಧ ರಸಗೊಬ್ಬರ ಬೇಡಿಕೆಯನ್ನು ತೃಪ್ತಿದಾಯಕವಾಗಿ ಈಡೇರಿಸಿರುವುದಕ್ಕೆ ಸಚಿವರು ಕೇಂದ್ರ ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಹಿಂಗಾರು ಮತ್ತು ಬೇಸಿಗೆಗೆ 16.94 ಸಾವಿರ ಹೆ ಟನ್ ಬೇಡಿಕೆಯಿದ್ದು, ಹಾಲಿ 10 ಲಕ್ಷದ 74 ಸಾವಿರ ಮೆ.ಟನ್ ದಾಸ್ತಾನು ರಸಗೊಬ್ಬರವಿದ್ದು, ಅಗತ್ಯಾನುಸಾರ ಬೇಡಿಕೆಗಳನ್ನು ರಾಜ್ಯ ಪೂರೈಸುತ್ತಿದೆ. ಇದೇ ರೀತಿ ಹಿಂಗಾರಿಗೆ ಅಗತ್ಯವಿರುವ ಪೊಟ್ಯಾಷ್ ರಸಗೊಬ್ಬರವನ್ನು ತಕ್ಷಣವೇ ಪೂರೈಸುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!