ದೊಡ್ಡಬಳ್ಳಾಪುರ: ತಾಲೂಕಿನ ನೇರಳಘಟ್ಟ ಗ್ರಾಮದಲ್ಲಿ ಇಂದು ಮತ್ತು ನಾಳೆ ಆಂಜನೇಯ ಸ್ವಾಮಿ ಹಾಗೂ ಗ್ರಾಮ ದೇವತೆಯಾದ ಮಹೇಶ್ವರಮ್ಮ ದೇವಿಯ ಹಾಗೂ ಕುಂಭಾಭಿಷೇಕ ಹಾಗೂ ನೂತನ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಆಯೋಜಿಸಲಾಗಿದೆ.
ನ.25ರಂದು ನಡೆಯುವ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಶ್ರೀ ಪರಮಪೂಜ್ಯ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗಡೆ, ಚಿಕ್ಕಬಳ್ಳಾಪುರ ಶಾಖ ಮಠದ ಶ್ರೀ ಶ್ರೀ ಮಂಗಳಾನಂದನಾಥ ಸ್ವಾಮೀಜಿ,
ಲೋಕಸಭಾ ಸದಸ್ಯರಾದ ಬಚ್ಚೇಗೌಡ, ಶಾಸಕ ಟಿ ವೆಂಕಟರಮಣಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಸಂಜಯ ನಗರದ ಎನ್.ಗೋಪಾಲಯ್ಯ ಮತ್ತಿತರರು ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……