ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 68 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಪರಿಶೀಲನೆ ಮಾಡುತ್ತಿದ್ದಾರೆ.
ಇದರ ಅನ್ವಯ ಪ್ರಕರವೊಂದರಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಸಬಾ – 2 ರಾಜಸ್ವ ನಿರೀಕ್ಷಕ ಲಕ್ಷ್ಮಿನರಸಯ್ಯ ಅವರು ತನ್ನ ಮೂಲಗಳಿಗಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಪೊಲೀಸ್ ಅಧೀಕ್ಷಕರು, ಎಸಿಬಿ ಕೇಂದ್ರ ವಲಯದ ನೇತೃತ್ವದಲ್ಲಿ 29 ಅಧಿಕಾರಿಗಳು, ಸಿಬ್ಬಂದಿ 4 ತಂಡ ದಾಳಿ ನಡೆಸಿದ್ದು, ಶೋಧನಾ ಕಾರ್ಯ ಮುಂದುವರೆಸಿದ್ದಾರೆ.
ಪ್ರಸ್ತುತ ಮೂಲಗಳ ಮಾಹಿತಿಯಂತೆ ಚಿನ್ನ , ಬೆಳ್ಳಿ ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿವೆ ಎನ್ನಲಾಗುತ್ತಿದೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……