ದೊಡ್ಡಬಳ್ಳಾಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ದೈನಂದಿನ ತ್ಯಾಜ್ಯವನ್ನು ಪ್ರತಿದಿನ ನೂರಾರು ಲಾರಿಗಳ ಮೂಲಕ ಭಕ್ತರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಗರೇಹಳ್ಳಿಯ MSGP ಕಸ ನಿರ್ವಹಣಾ ಘಟಕಕ್ಕೆ ತಂದು ಸುರಿಯುತ್ತಿರುವುದನ್ನು ನಿಲ್ಲಿಸುವಂತೆ ಅನಿರ್ದಿಷ್ಟಾವಧಿ ಧರಣಿಯನ್ನು ಆರಂಭಿಸಲಾಗಿದೆ
ತಾಲೂಕಿನ ಗುಂಡ್ಲಹಳ್ಳಿ ಬಳಿ ರೈತರ ದೇಣಿಗೆಯನ್ನು ನೀಡುವ ಮೂಲಕ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ನಿಲ್ಲಿಸುವಂತೆ ಅನಿರ್ದಿಷ್ಟವಾಧಿ ಧರಣಿಗೆ ಚಾಲನೆ ನೀಡಲಾಗಿದೆ.
ತ್ಯಾಜ್ಯ ಸಂಸ್ಕರಣಾ ಘಟಕ ಎಂಎಸ್ ಜಿಪಿಯನ್ನು ಕೂಡಲೇ ಮುಚ್ಚಬೇಕೆಂದು ಭಕ್ತರಹಳ್ಳಿ ಅಧ್ಯಕ್ಷರನ್ನೊಳಗೊಂಡು ಸರ್ವ ಸದಸ್ಯರ ಸಹಯೋಗ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಇಂದಿನಿಂದ ಅನಿರ್ದಿಷ್ಟವಾದಿ ಧರಣಿ ಸತ್ಯಗ್ರಹವನ್ನು ಹಮ್ಮಿಕೊಳ್ಳಲಾಗಿದೆ.
ನವ ಬೆಂಗಳೂರು ಹೋರಾಟ ಸಮಿತಿಯ ಗೌರವಧ್ಯಕ್ಷರಾದ ಕೆ.ವಿ.ಸತ್ಯ ಪ್ರಕಾಶ್ (ಸಾರಥಿ) ಸಂಸ್ಥಾಪಕ ಅಧ್ಯಕ್ಷ ಜಿ.ಎನ್.ಪ್ರದೀಪ್ ಮತ್ತು ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರ ಕೆ.ಸಿದ್ದಲಿಂಗಯ್ಯ ಅವರ ನೇತೃತ್ವದಲ್ಲಿ ಆರಂಭಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರು, ಯುವಕರು, ವಿದ್ಯಾರ್ಥಿಗಳು, ಮಹಿಳೆಯರು ಸ್ವಯಂಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧರಣಿ ಸತ್ಯಾಗ್ರಹಕ್ಕೆ ಬರುತ್ತಿದ್ದಾರೆ.
ಪೊಲೀಸರ ಮನವೊಲಿಕೆ: ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್‌ಕುಮಾರ್ ಮತ್ತು ಸಬ್ ಇನ್ಸ್ಪೆಕ್ಟರ್ ವಿ.ಗಜೇಂದ್ರ ರೈತರ ಮನವೊಲಿಸಲು ಯತ್ನಿಸಿದರು. ಆದರೆ ಇದಕ್ಕೆ ಜಗ್ಗದ ರೈತರು ಹಾಗೂ ಗ್ರಾಮಸ್ಥರು ತ್ಯಾಜ್ಯ ಘಟಕ ಮುಚ್ಚದ ಹೊರತಾಗಿ ಈ ಜಾಗದಿಂದ ಒಂದಿಂಚೂ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……