ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುತ್ತಿರುವ ಕಸದ ಲಾರಿಗಳನ್ನು ತಡೆದು ಬುಧವಾರ ನಡೆಸಲು ಉದ್ದೇಶಿಸಲಾಗಿದ್ದ ಧರಣಿಗೆ ಪೊಲೀಸರು ಅನುಮತಿ ನೀಡಿಲ್ಲ. ಹೀಗಾಗಿ ಕಸದ ಲಾರಿಗಳ ವಿರುದ್ಧ ನ.25 ರಿಂದ ಧರಣಿ ನಡೆಸಲು ಸ್ಥಳೀಯ ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಧರಣಿ ನಡೆಸುವ ಕುರಿತಂತೆ ಬುಧವಾರ ದೊಡ್ಡಬೆಳವಂಗಲ ಪೊಲೀಸರಿಗೆ ಅಧಿಕೃತವಾಗಿ ಮನವಿ ನೀಡಿ ಧರಣಿಗೆ ಅನುಮತಿ ಕೋರಿದ್ದಾರೆ. ಆದರೆ ಪೊಲೀಸರು ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಾತುಕತೆಗೆ ಸಭೆ ನಡೆಸಲಾಗುವುದು ಧರಣಿ ನಡೆಸಲು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಬಿಎಂಪಿ ಕಸದ ಲಾರಿಗಳನ್ನು ತಡೆಯುವ ಕುರಿತಂತೆ ಈಗ ಸ್ಥಳೀಯರು ಹಾಗೂ ಪೊಲೀಸರ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……