ಎಂಎಸ್ ಜಿಪಿ ತ್ಯಾಜ್ಯ ಸಂಸ್ಕರಣೆ ಘಟಕ ಪರಿಶೀಲಿಸಿದ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಡಳಿತ / ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮನವಿಗೆ ಒಪ್ಪದ ಧರಣಿ ನಿರತರು

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುತ್ತಿರುವ ಲಾರಿಗಳನ್ನು ತಡೆದು ಸ್ಥಳೀಯ ಗ್ರಾಮಸ್ಥರು ಗುರುವಾರ ಧರಣಿ ಆರಂಭಿಸಿರುವುದರಿಂದ ಕಸ ತುಂಬಿದ ಲಾರಿಗಳು ದಾಬಸ್ಪೇಟೆ- ದೊಡ್ಡಬಳ್ಳಾಪುರ ಹೆದ್ದಾರಿಯುದ್ದಕ್ಕು ಸಾಲುಗಟ್ಟಿನಿಂತಿವೆ.

ಧರಣಿ ನಿರತ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್ ಭೇಟಿ ನೀಡಿ ನಡೆಸಿದ ಮಾತುಕತೆಗೆ ಧರಣಿ ನಿರತರು ಮನ್ನಣೆ ನೀಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬರಿಗೈಯಲ್ಲಿ ಹಿಂದಿರುಗಿದ್ದಾರೆ.

ಈ ಹಿಂದೆ ಎಂಎಸ್ ಜಿಪಿ ಘಟಕದಲ್ಲಿನ ಅವೈಜ್ಞಾನಿಕ ಕಸ ವಿಲೇವಾರಿ ವಿರುದ್ಧ ಧರಣಿ ನಡೆಸಿದ್ದ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನೀಡಿದ್ದ ಎಲ್ಲಾ ಭರವಸೆಗಳು ಸುಳ್ಳಾಗಿವೆ. ಬೆಂಗಳೂರು ನಗರದಲ್ಲಿ ಕಸದ ರಾಶಿ ಹೆಚ್ಚಾದಾಗ ಹೋರಾಟಗಾರರ ಎಲ್ಲಾ ಮಾತುಗಳನ್ನು ಕೇಳಿ ಭರವಸೆ ನೀಡುವ ಅಧಿಕಾರಿ ಮತ್ತೆ ಮರೆಯುತ್ತ ಅದೇ ಹಳೇ ಚಾಳಿ ಮುಂದುವರೆಸಿ ಕಸದ ರಾಶಿ ತಂದು ಹಾಕುತ್ತಿರುವುದು ಮುಂದುವರೆದೇ ಇದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಿಂದ ಇಲ್ಲಿನ ಕಸ ವಿಲೇವಾರಿ ಘಟಕಕ್ಕೆ ಲಾರಿಗಳು ಕಸ ತಂದು ಸುರಿಯುವುದನ್ನು ನಿಲ್ಲಿಸದ ಹೊರತು ನಮ್ಮ ಧರಣಿಯನ್ನು ಹಿಂದಕ್ಕೆ ಪಡೆಯುವ ಅಥವಾ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಿದ್ದರಿಲ್ಲ ಎಂದು ಧರಣಿಯಲ್ಲಿ ಭಾಗವಹಿಸಿರುವ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ, ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಾ ಗೋವಿಂದರಾಜು,  ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ.ವಿ.ಸತ್ಯಪ್ರಕಾಶ್ ತಿಳಿಸಿದರು.

ಧರಣಿ ಆರಂಭಕ್ಕು ಮುನ್ನ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಎಲ್ಲಾ ಹಂತದ ಅಧಿಕಾರಿಗಳಿಗು ಇಲ್ಲಿನ ಕಸದ ಸಮಸ್ಯೆ ಕುರಿತು ಮನವಿಗಳನ್ನು ಸಲ್ಲಿಸಲಾಗಿತ್ತು. ಆದರೆ ನಮ್ಮ ಯಾವುದೇ ಮನವಿಗೂ ಸ್ಪಂಧಿಸದ ಅಧಿಕಾರಿಗಳು ಕಸದ ಲಾರಿಗಳನ್ನು ತಡೆದು ಧರಣಿ ಆರಂಭಿಸುತ್ತಿದ್ದಂತೆ ಹೋರಾಟಗಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಹೋರಾಟದ ದಿಕ್ಕುತಪ್ಪಿಸುವ ಹುನ್ನಾರನಡೆಸುತ್ತಿದ್ದಾರೆ. ನಮ್ಮ ಬದುಕಿನ ಅಳಿವು ಉಳಿವಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕು ಪ್ರಯತ್ನ ಮಾಡಿದರೆ ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ಅಥವಾ ಜಿಲ್ಲಾಡಳಿತದೊಂದಿಗೆ ನಡೆಸಿರುವ ಎಲ್ಲಾ ಮಾತುಕತೆಗಳು ಸುಳ್ಳಾಗಿರುವ ಹಿನ್ನೆಲೆಯಲ್ಲಿ ಈಗ ನಮ್ಮ ಏಕೈಕ ಬೇಡಿಕೆ ಕಸ ಇಲ್ಲಿಗೆ ಬರುವುದು ನಿಲ್ಲಬೇಕು ಎನ್ನುವುದು ಮಾತ್ರ ಎಂದರು.

ಧರಣಿಯಲ್ಲಿ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಹನುಮಯ್ಯ, ಕೃಷ್ಣಮೂರ್ತಿ, ಹನುಮಂತೇಗೌಡ, ಶ್ರೀಲತಾ, ಪ್ರತಿಮಾಉಮೇಶ್, ರವಿಕುಮಾರ್, ರಾಜಣ್ಣ, ರಾಮಲಕ್ಷ್ಮಮ್ಮ, ಪ್ರಸನ್ನ ಸೇರಿದಂತೆ ಗ್ರಾಮಸ್ಥರು ಧರಣಿಯಲ್ಲಿ ಭಾಗವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!