ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಇಂದು ನೆಲಮಂಗಲ ತಾಲ್ಲೂಕಿನ ವಿವಿಧ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು ಜಾಥಾ ನಡೆಸಿ, ತಂಬಾಕು ನಿಯಂತ್ರಣದ ಕುರಿತು ಬ್ಯಾನರ್, ಫಲಕಗಳನ್ನು ಹಿಡಿದು, ತಂಬಾಕು ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾಯ್ದೆ(ಕೋಟ್ಪಾ ಕಾಯ್ದೆ) ಕುರಿತು ಗುಲಾಬಿ ಹೂಗಳನ್ನು ನೀಡುವ ಮೂಲಕ ಜನಜಾಗೃತಿ ಮೂಡಿಸಿದರು.
ಶಾಲಾ ವಿದ್ಯಾರ್ಥಿಗಳು ಅಂಗಡಿ ಮುಂಗಟ್ಟುಗಳಲ್ಲಿ, ಶಾಲಾ ಆವರಣದ ಸುತ್ತಮುತ್ತ, ತಂಬಾಕು ಮಾರಾಟ ಹಾಗೂ ಖರೀದಿ ಮಾಡದಂತೆ ಮಾಹಿತಿಯುಳ್ಳ ಕರಪತ್ರ ಹಾಗೂ ಗುಲಾಬಿ ಹೂವನ್ನು ನೀಡುವ ಮೂಲಕ ಅರಿವು ಮೂಡಿಸಿದರು.
ನೆಲಮಂಗಲ ತಹಶೀಲ್ದಾರ್ ಮಂಜುನಾಥ್, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ಶಾಂತಲಾ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಮಾಲೋಚಕಿ ಡಾ.ವಿದ್ಯಾರಾಣಿ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಬಿಇಓ ರಮೇಶ್, ಬಿಆರ್‌ಸಿ ನರಸಿಂಹಯ್ಯ, ಸಿಬ್ಬಂದಿ ಪೆದ್ದಣ್ಣ, ಬಿಹೆಚ್‌ಇಓ ಜಯಲಕ್ಷ್ಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹರೀಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……