ಸೃಜನಾತ್ಮಕ ವ್ಯಕ್ತಿಯಾಗಿ ರೂಪುಗೊಳ್ಳಲು ಕಲೆ ಸಹಕಾರಿ: ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: ಸೃಜನಾತ್ಮಕ ವ್ಯಕ್ತಿಯಾಗಿ ರೂಪುಗೊಳ್ಳಲು ಕಲೆ ಸಹಕಾರಿಯಾಗಲಿರುವುದರಿಂದ ಯುವಜನತೆ ವಿದ್ಯಾಭ್ಯಾಸದೊಂದಿಗೆ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ತಮ್ಮಲ್ಲಿನ ಕಲೆಯ ಅನಾವರಣಕ್ಕೆ ಸಾಕ್ಷಿಯಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ ಅವರು ಹೇಳಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ 2021-22ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ, ಜಲಸಂರಕ್ಷಣೆ, ಭಾರತ ಸಂವಿಧಾನವು ಭಾರತ ಸಂವಿಧಾನ ರಚನಾ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26 ನೇ ನವೆಂಬರ್ 1949ರ ಸವಿನೆನಪಿಗಾಗಿ “ನವೆಂಬರ್ 26ರ ಭಾರತ ಸಂವಿಧಾನ ದಿನದ ಆಚರಣೆ” ಅಂಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಂತರ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ, ಅವರು ಮಾತಾನಾಡಿದರು.

ಕಲೆಗೆ ಯಾವುದೇ ರೀತಿಯ ಗಡಿರೇಖೆ ಇಲ್ಲದಿರುವುದರಿಂದ ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ. ಆದರೆ ಆಯ್ಕೆ ಮಾಡಿಕ್ಕೊಳ್ಳುವುದು ಕೆಲವರನ್ನು ಮಾತ್ರ. ಕಲಾವಿದರಾಗಿ ರೂಪುಗೊಳ್ಳುವ ಹಾದಿ ಹೆಚ್ಚು ಕಠಿಣವಾಗಿತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ನೃತ್ಯ ಪ್ರಕಾರಗಳಲ್ಲಿ, ಯುವಜನರು ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ದೇಶೀಯ ಕಲೆಗಳಿಗೂ ಆದ್ಯತೆ ನೀಡಿ, ವೇದಿಕೆಯನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ಭರತನಾಟ್ಯ, ಯಕ್ಷಗಾನ, ಕುಚುಪುಡಿ, ಕಥಕ್ ಸೇರಿದಂತೆ ಶಾಸ್ತ್ರೀಯ ನೃತ್ಯ ಶೈಲಿಗೆ ಅದರದ್ದೇ ಆದ ಕ್ರಮಬದ್ಧ ಅಧ್ಯಯನ ಹಾಗೂ ಪರಂಪರೆ ಇದೆ. ಯುವ ಜನರು ಯಾವುದಾದರೂ ಒಂದು ಕಲೆಯಲ್ಲಿ ತೊಡಗಿಸಿಕೊಂಡರೆ ಸಂಗಾತಿಯಂತೆ ಜೊತೆಗಿರುತ್ತದೆ ಹಾಗೂ ನೆಮ್ಮದಿಯ ವಾತಾವರಣ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಕೃಷ್ಣಪ್ಪ ಮಾತನಾಡಿ ಪ್ರಪಂಚದಲ್ಲಿ ಅತ್ಯಂತ ಶ್ರೇಷ್ಠ ಸಂವಿಧಾನವೆಂದರೆ ಅದು “ಭಾರತ ಸಂವಿಧಾನ” ಎಂದರೆ ತಪ್ಪಾಗಲಾರದು. ನಮ್ಮ ಸಂವಿಧಾನದಲ್ಲಿರುವ ವಿಷಯಗಳಿಂದಾಗಿ ಎಲ್ಲಾ ದೇಶಗಳು ಭಾರತದತ್ತ ತಿರುಗಿ ನೋಡುವ ಸಂದರ್ಭ ನಿರ್ಮಾಣವಾಗಿದ್ದು, ಸಮಾನತೆ, ಭ್ರಾತೃತ್ವ, ಜಾತ್ಯಾತೀತ ಹಾಗೂ ಮಾನವೀಯ ಮೌಲ್ಯಗಳನ್ನು ರೂಪಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಹಿರಿಮೆಗೆ ಪಾತ್ರವಾಗಿದೆ ಎಂದು ಹೇಳಿದರು. 

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಆಶಯದೊಂದಿಗೆ ಸಂವಿಧಾನ ಎಲ್ಲರಿಗೂ ಸ್ವಾತಂತ್ರ್ಯ ನೀಡುವ ಮೂಲಕ ನೆಮ್ಮದಿಯುತ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದೆ, ಇಂತಹ ವೇದಿಕೆ ಕಾರ್ಯಕ್ರಮಗಳು ಯುವಜನರಲ್ಲಿ ಉತ್ಸಾಹ ಹಾಗೂ ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು.

ಯುವಜನೋತ್ಸವ ಕಾರ್ಯಕ್ರಮಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ಎಂ.ಆರ್.ನರಸಿಂಹಯ್ಯ, ಯೋಜನಾ ನಿರ್ದೇಶಕ ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಟರಾಜ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಜಿ.ನಾಗರಾಜ್, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಕಾರ್ಯಕ್ರಮದ ತೀರ್ಪುಗಾರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!