ದೊಡ್ಡಬಳ್ಳಾಪುರ: ರಾಜ್ಯದಲ್ಲಿ ವಿಧಾನ ಪರಿಷತ್ತಿನ 15 ಕ್ಷೇತ್ರಗಳಿಗೆ ಸ್ಪರ್ಧಿಸಲು ಜೆಡಿಎಸ್ ಪಕ್ಷದಲ್ಲಿ ಅಭ್ಯರ್ಥಿಗಳೇ ಇಲ್ಲದಾಗಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಸಾಧನೆಗಳ ಆಧಾರದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾ ವಕ್ತರಾರರಾದ ಪುಷ್ಪಾಶಿವಶಂಕರ್ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಸಿ.ನಾರಾಯಣಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಗರಸಭೆ ಸೇರಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಸಾಕಷ್ಟು ಜನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಮಾತನಾಡಿ, ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳಿಗೆ ಬಿಜೆಪಿ ಅಧಿಕಾರಾವಧಿಯಲ್ಲಿ ಹೆಚ್ಚಿನ ಅನುದಾನ ಹಾಗೂ ಅಧಿಕಾರವನ್ನು ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಕ್ಷೇತ್ರಕ್ಕೆ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ರವಿ ಅವರ ಕೊಡುಗೆ ಕ್ಷೇತ್ರಕ್ಕೆ ಏನು ಇಲ್ಲದಾಗಿದೆ. ಕಾರ್ಯಕ್ರಮಗಳ ಪಟ್ಟಿಯಲ್ಲಿ ಶಿಷ್ಟಾಚಾರ ಪಾಲನೆಗಾಗಿ ಅವರ ಹೆಸರು ಇತ್ತೇ ವಿನಹ ಕಾರ್ಯಕ್ರಗಳಲ್ಲಿ ಬಾಗಿಯಾಗಿರುವುದು ಕಡಿಮೆಯೆ. ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಬಿಜೆಪಿ ಬೆಂಬಲಿಸಲಿದ್ದಾರೆ. ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಲಾಗಿದೆ. ಪಕ್ಷದ ಪರವಾಗಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ನಗರ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ತಾಲ್ಲೂಕು ಅಧ್ಯಕ್ಷ ನಾಗರಾಜ್, ಮುಖಂಡರಾದ ಮಂಜುನಾಥ್, ಲಕ್ಷ್ಮೀನಾರಾಯಣ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……