ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮೊದಲ ಮತ್ತು ಎರಡನೇ ಡೋಸ್ ಲಸಿಕಾಕರಣದಲ್ಲಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸುವ ಸಲುವಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಲಸಿಕಾಕರಣದ ವೇಗವನ್ನು ಹೆಚ್ಚಿಸಲು ನವೆಂಬರ್ 27 ಮತ್ತು 28 ರಂದು ರಾಜ್ಯಾದ್ಯಂತ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ “ಕೋವಿಡ್-19 ಲಸಿಕಾಕರಣ ಮೆಗಾಮೇಳ”ವನ್ನು ಆಯೋಜಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿಯೂ ನವೆಂಬರ್ 27 ಮತ್ತು 28 ರಂದು “ಕೋವಿಡ್-19 ಲಸಿಕಾಕರಣ ಮೆಗಾಮೇಳ” ನಡೆಯಲಿದ್ದು, ಲಸಿಕೆ ಪಡೆಯದವರು ಮೆಗಾಮೇಳದಲ್ಲಿ ಭಾಗವಹಿಸಿ ಮೊದಲ ಅಥವಾ ಎರಡನೇ ಡೋಸ್ ಲಸಿಕೆ ಪಡೆಯಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……