ದೊಡ್ಡಬಳ್ಳಾಪುರ: ತಾಲ್ಲೂಕಿನ ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ವತಿಯಿಂದ ಸಮಿತಿಯ ನೂತನ ಶಾಖೆ ಉದ್ಘಾಟನೆ ಹಾಗೂ ನಟ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಲಯನ್ಸ್ ಕ್ಲಬ್ ಯಲಹಂಕ ಇವರ ಸಹಯೊಗದೊಂದಿಗೆ ರಕ್ತದಾನ ಶಿಬಿರ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ಮಾತನಾಡಿ, ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ನಟರಾಗಿಯಷ್ಟೇ ಅಲ್ಲದೇ ಸಮಾಜಸೇವಕರಾಗಿ ಗಮನಾರ್ಹ ಸಾಧನೆ ಮಾಡಿದ್ದರು. ಅವರ ಸಮಾಜಸೇವೆ, ನೇತ್ರದಾನ ಮೊದಲಾದ ಕಾರ್ಯಗಳು ಹಾಗೂ ಬದುಕು ಸಮಾಜಕ್ಕೆ ಒಂದು ಮಾದರಿಯಾಗಿದೆ.
ಇಂದು ನಟ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ. ಸಂಘಟನೆಗಳು ಇಂತಹ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡರೆ, ಅವರ ಆತ್ಮಕ್ಕೆ ಶಾಂತಿ ಲಭಿಸಲಿದ್ದು, ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ.ಸದಸ್ಯ ಜಿ.ಲಕ್ಷ್ಮಿಪತಿ, ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಸುಬ್ರಮಣಿ, ತಾಲ್ಲೂಕು ಅಧ್ಯಕ್ಷ ರಮೇಶ್ ಸೊಣ್ಣಪ್ಪನಹಳ್ಳಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ಮಂಜುನಾಥ ನಾಯಕ್ ಹಾಗೂ ಸೊಣ್ಣಪ್ಪನಹಳ್ಳಿ ಗ್ರಾಮಸ್ಥರು ಮತ್ತು ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಪದಾಧಿಕಾರಿಗಳು ಇದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….