ದೊಡ್ಡಬಳ್ಳಾಪುರ: ನಟ ಪುನೀತ್ ರಾಜ್‌ಕುಮಾರ್ ಅವರು ಅಗಲಿ ತಿಂಗಳು ಕಳೆದಿದೆ. ಸೋಮವಾರ ಅವರ ಮೊದಲ ತಿಂಗಳ ಪುಣ್ಯಸ್ಮರಣೆ ಸಂದರ್ಭದಲ್ಲಿ ನಟರಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಪುನೀತ್ ಅವರ ಪತ್ನಿ ಅಶ್ವಿನಿ ಸೇರಿದಂತೆ ದೊಡ್ಮನೆ ಕುಟುಂಬದ ಸದಸ್ಯರು ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಇತ್ತ ತಾಲೂಕಿನ ಸಾಸಲು ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮಾಸಿಕ ಪುಣ್ಯಸ್ಮರಣೆಯನ್ನು ಸುಮಾರು 400 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಾಗೂ ಅನ್ನ ಸಂತರ್ಪಣೆ ನಡೆಸುವ ಮೂಲಕ ಆಚರಿಸಿದರು.
ಕಾರ್ಯಕ್ರಮಕ್ಕು ಮುನ್ನ ನಟ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಲಾಯಿತು.
ಶ್ರೀ ಆಂಜನೇಯ ಸ್ವಾಮಿ ದೇವಾಲಯದಿಂದ ಸಾಸಲು ಬಸ್ ನಿಲ್ದಾಣದವರೆಗೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….