ಬೆಳೆ ಹಾನಿಗೆ ಹೆಚ್ವಿನ ಅನುದಾನ ಒದಗಿಸಲು ಕೇಂದ್ರಕ್ಕೆ ಪತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಳೆ ಹಾನಿಗೆ ಹೆಚ್ಚಿನ ಅನುದಾನ  ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ  ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 

ಅವರು ಇಂದು ತುಮಕೂರು, ತುಮಕೂರಿನ ಸಿದ್ಧಗಂಗಾಮಠದ  ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ  ಪಾಲ್ಗೊಂಡ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು.

ಹಣಕಾಸಿನ ಅವಶ್ಯಕತೆ ಇದ್ದಲ್ಲಿ ಕೂಡಲೇ ತಿಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಹಿನ್ನೆಲೆಯಲ್ಲಿ  ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ತಕ್ಷಣವೇ  ಒಂದು ತಂಡವನ್ನು ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರದ ಸಮೀಕ್ಷೆಯೂ ನಡೆದಿದೆ ಎಂದರು.

ಬೆಳೆ ಹಾನಿಗೆ 685 ಕೋಟಿ ರೂ.ಗಳು ಜಿಲಾಡಳಿತಗಳಲ್ಲಿ ಈಗಾಗಲೇ ಲಭ್ಯವಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪರಿಹಾರ ಆಪ್ ನಲಿ ಮಾಹಿತಿ ಆಪ್ ಲೋಡ್ ಮಾಡಿದವರಿಗೆ ಪರಿಹಾರವನ್ನು ವಿತರಿಸಲಾಗುತ್ತಿದೆ ಎಂದು ಅವರು ನುಡಿದರು. 

ಕೋವಿಡ್ ನಿಯಂತ್ರಣಕ್ಕೆ ಕಟ್ಟೆಚ್ಚರ: ಕೋವಿಡ್ 19 ಅಲ್ಲಲ್ಲಿಸಾಂಕ್ರಾಮಿಕ  ಕ್ಲಸ್ಟರ್ ನಲ್ಲಿ ಕಂಡುಬರುತ್ತಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಕಂಟೇನ್ಮೆಂಟ್ ವಲಯಗಳನ್ನು ಮಾಡಿ, ಸಂಪರ್ಕಿತರ ಪರೀಕ್ಷೆ, ಕ್ವಾರಂಟೈನ್ ಮಾಡಲಾಗಿದೆ. ಕೆಲವು ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಬರುವ ಪ್ರತಿಯೊಬ್ಬರನ್ನು ಪರೀಕ್ಷಿಸಲಾಗುತ್ತಿದ್ದು,  ನೆಗೆಟಿವ್ ವರದಿ ಬಂದ ನಂತರವೇ ನಗರ ಪ್ರವೇಶಕ್ಕೆ ಅವಕಾಶ ನೀಡಲು ಸೂಚನೆ ನೀಡಲಾಗಿದೆ.  ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರ ಮೇಲೆಯೂ ದೊಡ್ಡ ಪ್ರಮಾಣದಲ್ಲಿ ನಿಗಾ ಇರಿಸಲಾಗಿದೆ.  ಎಲ್ಲಾ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.  ಕೇರಳದ ವಿದ್ಯಾರ್ಥಿಗಳು, ನರ್ಸಿಂಗ್ ಸಿಬ್ಬಂದಿ ಇವರುಗಳ ಬಗ್ಗೆಯೂ ನಿಗಾ ವಹಿಸಲಾಗುತ್ತಿದೇ ಎಂದರು. 

ಹೊಸ ತಳಿಯ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ನಿರ್ದೇಶನಗಳಂತೆ  ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಶಾಲಾ ಕಾಲೇಜುಗಳ ಮೇಲೆಯೂ ನಿಗಾ ವಹಿಸಿದ್ದು, ಎಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ ಅಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]