ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿವಿಧ ನಿರ್ಬಂಧಗಳನ್ನು ವಿಧಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದಿಂದ ಹೊರಡಿಸಿರುವ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ವಿವಿಧ ನಿರ್ಬಂಧಗಳನ್ನು ವಿಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಹೊರರಾಜ್ಯ ಜಿಲ್ಲೆಗಳ ಗಡಿಗಳಲ್ಲಿ ಕಟ್ಟೆಚ್ಚರ  ಹಾಗೂ ಜಿಲ್ಲಾ ವ್ಯಾಪ್ತಿಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸುವುದು ಕಡ್ಡಾಯವಾಗಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುವವರಿಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಲ್ಲಿ, 16 ದಿನಗಳ ಹಿಂದೆ ವಿದೇಶದಿಂದ ಜಿಲ್ಲೆಗೆ ಆಗಮಿಸಿದವರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿಕೊಳ್ಳಬೇಕು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಸಾಮಾಜಿಕ ಗುಂಪು, ಗುಂಪಾಗಿ ಪ್ರತಿಭಟನೆ ಅಥವಾ ಮುಷ್ಕರಕ್ಕೆ ಎರಡು ಗಂಟೆಗಿಂತ ಹೆಚ್ಚು ಅವಧಿ ಒಂದೇ ಸ್ಥಳದಲ್ಲಿ ಸೇರುವಂತಿಲ್ಲ ಹಾಗೂ ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಬೇಕು.

ಹೋಟೆಲ್, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮಾಲ್‌ಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನೇಷನ್ ಪಡೆದಿರಬೇಕು.

ಕೋವಿಡ್-19ರ ನಿಯಂತ್ರಣ ಕ್ರಮಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದ್ದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60ರ ಜೊತೆಗೆ, ಭಾರತೀಯ ದಂಡಸಂಹಿತೆ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]