ದೊಡ್ಡಬಳ್ಳಾಪುರ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜು ಅವರು ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಿದರು.
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ನಗರಸಭೆ ಚುನಾಯಿತರಿಗೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ಈ ವೇಳೆ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮೀನಾರಾಯಣ್, ಸದಸ್ಯರಾದ ಎಸ್.ವತ್ಸಲ, ಎಚ್.ಎಸ್.ಶಿವಶಂಕರ್, ಆರ್.ಶಿವಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಾನಂದರೆಡ್ಡಿ, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಶಿವಾನಂದರೆಡ್ಡಿ ಮತ್ತಿತರರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….