ಬೆಂಗಳೂರು: ಕರೊನಾ ನಿಯಂತ್ರಣಕ್ಕೆ ಕಠಿಣ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದೆ. ಜನರು ಸಹ ಮುನ್ನೆಚ್ಚರಿಕೆಯಿಂದ ಇರಬೇಕು. ಸರ್ಕಾರ ಒಂದೇ ಇದನ್ನು ನಿಭಾಯಿಸಲು ಸಾಧ್ಯವಿಲ್ಲ.ಜನರು ನಮ್ಮ ಜೊತೆ ಕೈ ಜೋಡಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಸಹ ಮುನ್ನೆಚ್ಚರಿಕೆಯಿಂದ ಇರಬೇಕು. ಸರ್ಕಾರ ಒಂದೇ ಇದನ್ನು ನಿಭಾಯಿಸಲು ಸಾಧ್ಯವಿಲ್ಲ. ಜನರು ನಮ್ಮ ಜೊತೆ ಕೈ ಜೋಡಿಸಬೇಕು. ಜನರೇ ಸ್ವಯಂ ಆಗಿ ಬಂದು ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಮಾಹಿತಿಯ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ ಏರ್‌ಪೋರ್ಟ್‍ನಲ್ಲಿ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲು ಪ್ರಾರಂಭ ಮಾಡಿದ್ದೇವೆ. ಏರ್‌ಪೋರ್ಟ್‍ನಲ್ಲಿ ಕರೊನಾ ಟೆಸ್ಟ್ ಆದ ಬಳಿಕ ವರದಿ ಬರುವವರೆಗೂ ಪ್ರಯಾಣಿಕರು ಅಲ್ಲಿಯೇ ಇರಬೇಕಾಗುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….