ದೊಡ್ಡಬಳ್ಳಾಪುರ: ತಾಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮನವರ ಬೆಟ್ಟದಲ್ಲಿ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ತಿಕ ಮಾಸದ ಕಡೆಯ ಮಂಗಳವಾರದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ದೇವರ ಮೂರ್ತಿಗಳಗೆ ವಿಶೇಷ ಅಲಂಕಾರ, ಉಯ್ಯಾಲೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಿತು.
ಲಕ್ಷ ದೀಪೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು ಹಾಜರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….