ಬೆಂಗಳೂರು: ಕೋವಿಡ್ ರೂಪಾಂತರಿ ವೈರಸ್ ಬೆಂಗಳೂರಿಗೆ ಕಾಲಿಟ್ಟಿದ್ದು, ದೇಶದಲ್ಲಿ ಮೊದಲ 2 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ.
ಆಫ್ರಿಕಾದಿಂದ ಬಂದಿದ್ದ 66ವರ್ಷದ ವ್ಯಕ್ತಿ, ಮತ್ತು 46 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢ ಪಟ್ಟಿದೆ ಎಂದು ತಿಳಿದು ಬಂದಿದೆ.
ಪತ್ತೆಯಾದ ಕೇಸ್ ಗಳ ಪೈಕಿ ಓರ್ವ ಸೋಂಕಿತ ಬೆಂಗಳೂರಿನಲ್ಲಿ ಇರುವುದಾಗಿ ತಿಳಿದು ಬಂದಿದೆ.
ಒಮಿಕ್ರಾನ್ ಕುರಿತು ಜನತೆ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲವಾಗಿದ್ದು, ಮುಂಜಾಗ್ರತೆ ವಹಿಸಬೇಕೆಂದು ಜಯದೇವಾ ಆಸ್ಪತ್ರೆ ಮುಖ್ಯಸ್ಥ ಡಾ.ಮಂಜುನಾಥ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….