ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2021-22ನೇ ಸಾಲಿಗೆ ವಿವಿಧ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಉಪ್ಪಾರ ಸಮುದಾಯದ ಪ್ರವರ್ಗ-1ರ 53(ಎ)ಯಿಂದ 53(ವಿ)ವರೆಗಿನ ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲುಕುಟ್ಟಗೆ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ಮೇಲು ಸಕ್ಕರೆ, ನಾಮದ ಉಪ್ಪಾರ, ಪಡಿತ್, ಪಡಿತಿ, ಪಾಡಿ, ಸಗರ, ಸುಣ್ಣಗಾರ, ಸುಣ್ಣ ಉಪ್ಪಾರ, ಉಪ್ಪಳಿಗ, ಉಪ್ಪಳಿಗಶೆಟ್ಟಿ, ಉಪ್ಪಳಿಯನ್, ಉಪ್ಪೇರ, ಯಕಲಾರ, ಯಕ್ಕಲಿ ಜಾತಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‌ಸೈಟ್ uppardevelopment.karnataka.gov.in ಇಲ್ಲಿ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಗೆ ಸಲ್ಲಿಸುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದು, 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಉಪ್ಪಾರ ಸಮುದಾಯದ ವಿದ್ಯಾರ್ಥಿಗಳಿಂದ ನವೀಕರಣ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸುವಿಧಾ ತಂತ್ರಾಂಶದ ಮುಖಾಂತರ http://Suvidha.karnataka.gov.in ಸಲ್ಲಿಸುವುದು.
ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 2022ರ ಜನವರಿ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿ ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ: 70262 88888 ಮತ್ತು ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ: 080-29605761 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….