ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಡಿಸೆಂಬರ್ 4 ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.
ಇಂದಿನಿಂದ ಡಿ.4ರವರೆಗೂ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಗುಜರಾತ್ ಸೇರಿದಂತೆ 10 ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೋಸ್ಟಲ್ ಮಿರರ್ ವರದಿ ತಿಳಿಸಿದೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….