ದೊಡ್ಡಬಳ್ಳಾಪುರ: ಯಲಹಂಕ ವಿಧಾನಸಭೆ ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಯ ಸಂಚಿನ ವಿಡಿಯೋ ಹಾಗೂ ಆಡಿಯೋ ಬಾಂಬ್ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಕುಳ್ಳ ದೇವರಾಜ್ ನಡುವೆ ಹತ್ಯೆ ಸ್ಕೆಚ್ ಕುರಿತಂತೆ ನಡೆದ ಮಾತುಕತೆ ಈಗ ದೊಡ್ಡ ಸದ್ದು ಎಬ್ಬಿಸಿದೆ.
ಈ ಪ್ರಕರಣ ಪೊಲೀಸ್ ಮೆಟ್ಟಿಲೇರಿದ್ದು ಎಫ್ಐಆರ್ ದಾಖಲಾಗಿದೆ ಹಾಗೂ ಆರೋಪಿಗಳ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಿರುದ್ಧ ಎಫ್ಐಆರ್ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಕುರಿತಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನ್ಯಾಯಾಲಯದ ಅನುಮತಿ ಪಡೆದು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 120ಬಿ ಮತ್ತು 506 ರಡಿ ಎಫ್ ಐ ಆರ್ ದಾಖಲು ಮಾಡಲಾಗಿದೆ.
ಇನ್ನೂ ಹತ್ಯೆ ಸಂಚನ್ನು ಖಂಡಿಸಿ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….