ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವಿದ್ಯಾಪೀಠ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
84 ವರ್ಷದ ಶಿವರಾಂ ಅವರು ಮೂರು ದಿನಗಳ ಹಿಂದೆ ಮನೆಯಲ್ಲಿ ಅಯ್ಯಪ್ಪ ಸ್ವಾಮಿಯ ಪೂಜೆ ಮಾಡುವ ವೇಳೆ ಆಯತಪ್ಪಿ ಬಿದ್ದು ತಲೆಯ ಭಾಗಕ್ಕೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಲು ಸೂಚಿಸಿದರಾದರೂ ವಯಸ್ಸಾದ ಕಾರಣ ಸರ್ಜರಿ ಮಾಡಲಾಗಿಲ್ಲ ಎಂದು ಅವರ ಪುತ್ರ ರವಿಶಂಕರ್ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….