ದೊಡ್ಡಬಳ್ಳಾಪುರ: ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು, ಎರಡು ಅಂಗಡಿಗಳ ಶೆಟರ್ ಮುರಿದು ಹಣ ದೋಚಿರುವ ಘಟನೆ ತಾಲೂಕಿನ ಜಿ.ಹೊಸಹಳ್ಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಜಿ.ಹೊಸಹಳ್ಳಿಯ ಬಸ್ ನಿಲ್ದಾಣದಲ್ಲಿರುವ ಸಂದೇಶ್ ಎನ್ನುವವರಿಗೆ ಸೇರಿದ ಬೇಕರಿ ಹಾಗೂ ಅದರ ಪಕ್ಕದಲ್ಲೆ ಇರುವ ರಾಮಕೃಷ್ಣಪ್ಪ ಎನ್ನುವವರಿಗೆ ಸೇರಿದ ಚಿಲ್ಲರೆ ಅಂಗಡಿಯ ಶೆಟರ್ ಮುರಿದು ಕಳ್ಳತನ ನಡೆಸಲಾಗಿದೆ.
ಶುಕ್ರವಾರ ಬೆಳಗ್ಗಿನ ಜಾವ 3ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಶಿಪ್ಟ್ ಡಿಸೈರ್ ಕಾರಿನಲ್ಲಿ ಬಂದ ಕಳ್ಳರು ಸುಮಾರು 10 ಸಾವಿರ ಮೌಲ್ಯದ ನಗದು ದೋಚಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ.
ಘಟನೆ ಕುರಿತು ಜಿ.ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….