ಎಂಎಸ್ ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧದ ಧರಣಿಗೆ ಮಾಜಿ ಪ್ರಧಾನ ಮಂತ್ರಿ ಎಚ್.ಡಿ .ದೇವೇಗೌಡರ ಬೆಂಬಲ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ  ಎಂಎಸ್ ಜಿಪಿ ಕಸ ವಿಲೇವಾರಿ ಘಟಕವನ್ನು ಬಂದ್ ಮಾಡುವಂತೆ ಸ್ಥಳೀಯ ಗ್ರಾಮಸ್ಥರು ನಡೆಸುತ್ತಿರುವ ಧರಣಿಗೆ ಮಾಜಿ ಪ್ರಧಾನ ಮಂತ್ರಿ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಸೇರಿದಂತೆ ಹಲವಾರು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದ್ದು ಧರಣಿ ನಿರತರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. 

ಕಸ ವಿಲೇವಾರಿ ಘಟಕವನ್ನು ಮುಚ್ಚುವಂತೆ ನಡೆಯುತ್ತಿರುವ ಧರಣಿಗೆ ಶುಕ್ರವಾರ ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳು ಹಾಗೂ ನೆಲಮಂಗಲ ಸೋಂಪುರ ಹೋಬಳಿಯ ವಿವಿಧ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹೋರಾಟಕ್ಕೆ ಬೆಂಬಲ ಸೂಚಿಸಿ ಧರಣಿಯಲ್ಲಿ ಭಾಗವಹಿಸಿದ್ದರು. 

ದೂರವಾಣಿಯಲ್ಲಿ ಮಾತನಾಡಿರುವ ದೇವೇಗೌಡರು ‘ಇಲ್ಲಿನ ಎಲ್ಲಾ ಮಾಹಿತಿಯನ್ನು ತಿಳಿದಿದ್ದು ವಿಧಾನ ಪರಿಷತ್ ಚುನಾವಣೆಯ ನಂತರ ಜೆಡಿಎಸ್ ಪಕ್ಷದ ಮುಖಂಡರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿರುವುದಾಗಿ ಧರಣಿಯ ನೇತೃತ್ವ ವಹಿಸಿರುವ ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ, ಕಸ ತುಂಬಿದ ಲಾರಿಗಳು ಇಲ್ಲಿಗೆ ಬರುವುದಿಲ್ಲ ಎನ್ನುವ ಲಿಖಿತ ಭರವಸೆ ದೊರೆಯುವವರೆಗೂ ನಮ್ಮ ಧರಣಿ ಮುಂದುವರೆಯಲಿದೆ ಎಂದಿದ್ದಾರೆ. 

ಲಾರಿ ವಶಕ್ಕೆ: ಕುಣಿಗಲ್ ಮೂಲದ ಖಾಸಗಿ ಕಂಪನಿಗೆ ಸೇರಿದ ಕೈಗಾರಿಕಾ ತ್ಯಾಜ್ಯದ ನೀರನ್ನು ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ತಂದು ಸುರಿಯಲು ಬಂದಿದ್ದ ವಾಹನವನ್ನು ಪ್ರತಿಭಟನಾಕಾರರು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಕರಣ ದಾಖಲು ಮಾಡಿಸಿದ್ದಾರೆ.

ನೆಲಮಂಗಲದ ತಾಲ್ಲೂಕು ಬಿಜೆಪಿ ಮುಖಂಡ ಜಗದೀಶ್ ಚೌಧರಿ ಮಾತನಾಡಿ, ರೈತರ ಪರ ಹೋರಾಟಕ್ಕೆ ನಮ್ಮ ಬೆಂಬಲವೂ ಇದೆ. ವಿದೇಶಗಳಲ್ಲಿ ಕಸದಿಂದ ರಸ ಎಂಬಂತೆ ಪರಿಣಾಮಕಾರಿಯಾಗಿ ಸೂಕ್ತವಾಗಿ ವಿಲೇವಾರಿ ಬಹುಪಯೋಗಿಯಾಗಿ ಬಳಸುತ್ತಿದ್ದಾರೆ. ಇಲ್ಲಿ ಮಾತ್ರ ಕಸದಿಂದ ವಿಷವನ್ನು ಬಿಟ್ಟು ರೈತರ ಬದುಕನ್ನು ಹಾಳು ಮಾಡಲಾಗಿದೆ. ಇದು ಹೀಗೆ ಮುಂದುವರೆದರೆ ಮುಂದಿನ 20 ವರ್ಷಗಳಲ್ಲಿ ಇಲ್ಲಿ ಜನರೇ ವಾಸಿಸದ ಪ್ರದೇಶವಾಗಿ ಮಾರ್ಪಡುತ್ತದೆ ಎಂದು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ವಕೀಲ ಜಗದೀಶ್ ಮಾತನಾಡಿ,ಇಲ್ಲಿನ ಪ್ರದೇಶ ಎರಡು ದಶಕಗಳು ಕಳೆದರು ಸರಿಹೋಗದಷ್ಟು ಹಾಳಾಗಿದೆ. ಬೆಳೆಗಳನ್ನು ಕೂಡ ಹಾಳಗಿವೆ. ಕಾಲುವೆ, ಕುಂಟೆಗಳಲ್ಲಿನ ನೀರು ಯಾವ ಜಾನುವಾರುಗಳು ಕುಡಿಯಲು ಯೋಗ್ಯವಾಗಿಲ್ಲ. ರೈತರಿಗೂ ಇಲ್ಲಿನ ನೀರಿನಿಂದ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರವಾಗಿ ಬಿಬಿಎಂಪಿ ಕಸದ ಘಟಕವನ್ನು ಮುಚ್ಚಲೇಬೇಕು ಎಂದು ಆಗ್ರಹಿಸಿದರು. ಕಾನೂನು ಹೋರಾಟಕ್ಕೂ ಸಹಕರಿಸುತ್ತೇನೆ ಎಂದು ಭರವಸೆ ನೀಡಿದರು.

ಎರಡನೇ ಬಾರಿಗೆ ಪರಿಶೀಲನೆ: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಯವರು ಯಾವುದೇ ರೀತಿಯ ಪರಿಶೀಲನೆಯನ್ನು ನಡೆಸದೇ 2026ರವರೆಗೂ ಕಸ ವಿಲೇವಾರಿ ಘಟಕವನ್ನು ನಡೆಸಲು ಪರವಾನಿಗಿಯನ್ನು ನವೀಕರಿಸಿ ನೀಡಿದ್ದರು. ಆದರೆ ಗ್ರಾಮಸ್ಥರ ಧರಣಿ ನಂತರ ಕಸ ವಿಲೇವಾರಿ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಇಲ್ಲಿನ ವಾಸ್ತವ ವರದಿಯನ್ನು ಸಂಗ್ರಹ ಮಾಡಿದ್ದಾರೆ. ಬೆಂಗಳೂರು ಉತ್ತರ ವಲಯ ಹಿರಿಯ ಪರಿಸರ ಅಧಿಕಾರಿ ಸಿದ್ದರಾಮಯ್ಯ, ಪ್ರಾದೇಶಿಕ  ಪರಿಸರ ಅಧಿಕಾರಿ ಸುನಿತಾ ಅವರು ಕಸ ವಿಲೇವಾರಿ ಘಟಕದ ಸುತ್ತಲಿನ ಕಲುಷಿತ ನೀರು, ಎಲ್ಲೆಂದರಲ್ಲಿ ಸುರಿಯಲಾಗಿರುವ ಕಸದ ಮಾದರಿಯನ್ನು ಸಂಗ್ರಹ ಮಾಡಿದ್ದಾರೆ.

ಕಸ ವಿಲೇವಾರಿ ಘಟಕದಲ್ಲಿನ ವಾಸ್ತವ ವರದಿಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರ ಕಚೇರಿಗೆ ನ್ಯಾಯಸಮ್ಮತವಾಗಿ ನೀಡಿದರೆ ಒಂದು ವಾರದ ಒಳಗೆ ಇಲ್ಲಿನ ಕಸ ವಿಲೇವಾರಿ ಘಟಕದ ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ ಎಂದು ತಿಳಿಸಿರುವ ಧರಣಿಯಲ್ಲಿ ಭಾಗವಹಿಸಿರುವ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ಕಸ ವಿಲೇವಾರಿ ಘಟಕದಿಂದ ಹೊರ ಬಂದು ತಣ್ಣೀರನಹಳ್ಳಿ ಸಮೀಪದ ಚಕ್ಡ್ಯಾಂನಲ್ಲಿ ಸಂಗ್ರಹವಾಗಿದ್ದ ಕಲುಷಿತ ನೀರನ್ನು ಲಾರಿಗಳ ಟ್ಯಾಂಕರ್ಗಲ್ಲಿ ತುಂಬಿಕೊಂಡು ಹೋಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ವಿವಿಧ ಗ್ರಾಮಗಳ ಸರ್ಕಾರಿ ಜಮೀನು ಸೇರಿದಂತೆ ರಾತ್ರಿ ವೇಳೆಯಲ್ಲಿ ಕೆರೆಗಳ ಸಮೀಪ ಸುರಿದು ಬರುತ್ತಿರುವ ಬಗ್ಗೆ ಮಾಹಿತಿ ಇದೆ. ಮಧುರೆ ಹೋಬಳಿಯ ರೈತರು ಎಚ್ಚರದಿಂದ ಗಮನಿಸುವ ಮೂಲಕ ತಮ್ಮ ಗ್ರಾಮಗಳ ಕೆರೆಗಳು ಕಲುಷಿತವಾಗದಂತೆ ಎಚ್ಚರವಹಿಸಬೇಕಿದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!