ಜೆಡಿಎಸ್ ಜೊತೆ ಹೊಂದಾಣಿಕೆ ಊಹಾಪೋಹ: ವಿಧಾನ ಪರಿಷತ್ ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ವಿಧಾನ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎನ್ನುವ ಊಹಾಪೋಹಗಳು ಎದ್ದಿದ್ದು, ಮತದಾರರು ಗೊಂದಲಕ್ಕೊಳಗಾಗಬಾರದು. ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೇ  ತಾವು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಹೇಳಿದ್ದಾರೆ.

ಅವರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಷ್ಟ್ರಮಟ್ಟದಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭೇಟಿ ಮಾಡಿರುವುದು ಸೌಹಾರ್ದವಷ್ಟೆ. ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳುತ್ತಾ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಿಂದೆ ಸರಿಯುತ್ತಿದ್ದಾರೆ ಎಂದು ಗಾಳಿ ಮಾತು ಹಬ್ಬಿಸುತ್ತಿದ್ದಾರೆ. ನಮಗೆ ಕುಮಾರಸ್ವಾಮಿ ಅವರ ಮೇಲೆ ಗೌರವವಿದೆ. ಆದರೆ ಅವರ ಪಕ್ಷದ ಮತ ಹಾಗೂ ಪ್ರಚಾರ ಅವರದ್ದು, ನಮ್ಮ ಪ್ರಚಾರ ಹಾಗೂ ಮತಗಳು ನಮ್ಮದು. ಇದರಲ್ಲಿ ಯಾವುದೇ ಹೊಂದಾಣಿಕೆಯಿಲ್ಲ. ಪ್ರಸ್ತುತ ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ ಅವರಿಗೆ ಇನ್ನೂ 1.5 ವರ್ಷ ಕಾಲಾವಕಾಶವಿದೆ. ಹಾಗಾಗಿ ರಾಷ್ಟ್ರೀಯ ಪಕ್ಷವಾದ ನಮಗೆ ಅವರೇ ಬೆಂಬಲಿಸಲಿ. ಕ್ಷೇತ್ರದಲ್ಲಿ ಎಲ್ಲಿಯೂ ಬಿಜೆಪಿ ಶಾಸಕರಿಲ್ಲ. ಹಾಗಾಗಿ ವಿಧಾನ ಪರಿಷತ್ ಸದಸ್ಯರ ಅಗತ್ಯ ಇದೆ. ಹೊಂದಾಣಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಮತದಾರರು ಕಿವಿಗೊಡಬಾರದು. ವಿಧಾನ ಪರಿಷತ್ ಕ್ಷೇತ್ರಕ್ಕೆ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ರವಿ ಅವರ ಕೊಡುಗೆ ಕ್ಷೇತ್ರಕ್ಕೆ ಏನು ಇಲ್ಲದಾಗಿದೆ. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳಿಗೆ ಬಿಜೆಪಿ ಅಕಾರಾವಯಲ್ಲಿ ಹೆಚ್ಚಿನ ಅನುದಾನ ಹಾಗೂ ಅಕಾರವನ್ನು ನೀಡಲಾಗಿದೆ.ಮುಂದೆಯೂ ಹೆಚ್ಚಿನ ಅನುದಾನಗಳನ್ನು ನೀಡಲು ಶ್ರಮಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಶಿವಾನಂದ ರೆಡ್ಡಿ, ಜಿಲ್ಲಾ ಬಿಜೆಪಿ ಕಾರ್ಯಾಲಯದ ವ್ಯವಸ್ಥಾಪಕ ಮಂಜುನಾಥ್ ಮತ್ತಿತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!