ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2021-22ನೇ ಸಾಲಿಗೆ ವಿವಿಧ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಸವಿತಾ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಯಡಿ ಕುಲಕಸುಬು/ ಸಾಂಪ್ರಾದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಬ್ಯೂಟಿಷಿಯನ್, ಡೋಲು, ವಾದ್ಯ ಮತ್ತು ಬ್ಯಾಂಡ್‍ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳನ್ನು ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗುವುದು.
ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ, ಸಾಂಪ್ರದಾಯಿಕ ವೃತ್ತಿಗಳು ಹಾಗೂ ವೃತ್ತಿ ಕಸಬುದಾರರಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗುವುದು.
ಅರ್ಜಿ ನಮೂನೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್‍ಸೈಟ್ https://kssd.karnataka.gov.in ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 2022ರ ಜನವರಿ 10 ರೊಳಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 080-29506174-5 ಮತ್ತು ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ: 080-29605761 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….