ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು/ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯುವುದಕ್ಕಾಗಿ ನಿಗದಿತ ನಮೂನೆಯಲ್ಲಿ ದಾಖಲೆಗಳನ್ನು ಸಲ್ಲಿಸಲು 2021ರ ಡಿಸೆಂಬರ್ 24 ಕೊನೆಯ ದಿನವಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118, ಚಪ್ಪರಕಲ್ಲು, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲೆಗಳಾದ ಜೀವಿತ ಪ್ರಮಾಣಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ (PPO)ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಲಾವಿದರು ಕಡ್ಡಾಯವಾಗಿ ಆರ್.ಡಿ. ಸಂಖ್ಯೆ ಇವರು ಜಾತಿ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರವನ್ನು ಲಗತ್ತಿಸಿ 2021ರ ಡಿಸೆಂಬರ್ 24 ರೊಳಗಾಗಿ ಸಲ್ಲಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….