ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಆಯ್ಕೆ ಶೀಘ್ರ: ಬಿ.ಎನ್.ಕೃಷ್ಣಪ್ಪ

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪರಿಷತ್ತಿನ ಶೀಘ್ರದಲ್ಲಿಯೇ ಘಟಕಗಳನ್ನು ವ್ಯವಸ್ಥಿತವಾಗಿ ರಚಿಸಲಾಗುವುದು ಕ್ರಿಯಾಯೋಜನೆ ರೂಪಿಸುವ ಮೂಲಕ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದ್ದಾರೆ.

ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ತಮ್ಮನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಮತದಾರರ ಪಟ್ಟಿ ಸೇರಿದಂತೆ ಹಲವಾರು ತೊಡಕುಗಳಿದ್ದವು. ಪರಿಷತ್ತು ಸರ್ಕಾರದ ಅನುದಾನಿತ ಸಂಸ್ಥೆಯಾಗಿದ್ದರೂ ಸಹ ಇದು ಸಹಕಾರ ಸಂಘಗಳ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಸಹಕಾರ ಸಂಘಗಳ ನಿಯಮಗಳೇ ಇದಕ್ಕೂ ಅನ್ವಯಿಸುತ್ತದೆ. ಕಸಾಪ ಅಧ್ಯಕ್ಷರ ಅವ 3ವರ್ಷದಿಂದ 5 ವರ್ಷಕ್ಕೆ ಏರಿಸಿರುವುದು, ಪರಿಷತ್ತಿನ ಸದಸ್ಯತ್ವ ಶುಲ್ಕವನ್ನು 250 ರೂಗಳಿಗೆ ಇಳಿಸಿರುವುದು ಮೊದಲಾದ ವಿಚಾರಗಳು ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜ್ಯೋಷಿ ಅವರ ಸಭೆಯಲ್ಲಿ ಚರ್ಚಿತವಾಗಿವೆ.

ಸದಸ್ಯತ್ವ ಶುಲ್ಕವನ್ನು 250 ರೂಗಳಿಗೆ ಇಳಿಸುವ ಕುರಿತು ಅಧ್ಯಕ್ಷರು ಈಗಾಗಲೇ ಭರವಸೆ ನೀಡಿರುವ ಹಿನ್ನಲೆಯಲ್ಲಿ ಶುಲ್ಕ  ಇಳಿಸುವುದು ಖಚಿತವಾಗಿದೆ. ಕಸಾಪದ ನೂತನ ನಿಬಂಧನೆಗಳನ್ವಯ ಜಿಲ್ಲಾ ಹಾಗೂ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ನಮ್ಮ ಜಿಲ್ಲೆ ನಗರ ಹಾಗೂ ಗ್ರಾಮೀಣದ ಸೊಗಡು ಇರುವ ಜಿಲ್ಲೆಯಾದ್ದರಿಂದ ಎಲ್ಲಾ ವರ್ಗದ ಜನರ ಅಗತ್ಯ ಸಹಕಾರ ನೆರವು ಪಡೆದು ಪರಿಷತ್ತಿನ ಕಾರ್ಯ ಚಟುವಟಿಕೆಗಳನ್ನು ರೂಪಿಸಲಾಗುವುದು ಎಂದರು.

ಹಿರಿಯ ಕನ್ನಡ ಪರ ಹೋರಾಟಗಾರ ಜಿ.ಸತ್ಯನಾರಾಯಣ್ ಮಾತನಾಡಿ, ಜಿಲ್ಲೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಹುಡುಕಾಟದಲ್ಲಿದ್ದಾಗ ನಮಗೆ  ಬಿ.ಎನ್.ಕೃಷ್ಣಪ್ಪ ಅವರು ಕಂಡು ಬಂದರು. ಆದರೆ ದೊಡ್ಡಬಳ್ಳಾಪುರದಲ್ಲಿ ಅವರ ಪರವಾಗಿ ಬೂತ್ ಏಜೆಂಟ್ ಸಹ ನೇಮಕ ಮಾಡಲು ಆಗದೇ ಇರುವ ಪರಿಸ್ಥಿತಿ ಇತ್ತು.  ಇಂತಹ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಕಸಾಪ ಮತದಾರರು ಅವರನ್ನು ಬೆಂಬಲಿಸಿದ್ದಾರೆ. ಗಾಂಧಿ ಚೌಕಕ್ಕೇ ಸೀಮಿತವಾಗಿದ್ದ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಎಲ್ಲಡೆ ನಡೆಯುವಂತಾಗಬೇಕು. ಬರೀ ಸಾಹಿತ್ಯಕ ಕಾರ್ಯಕ್ರಮಗಳಷ್ಟೇ ಅಲ್ಲದೇ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕನ್ನಡದ ವಿಚಾರಕ್ಕೆ ದಕ್ಕೆ ಬಂದಾಗ ದನಿ ಎತ್ತುವುದು ಹಾಗೂ  ಕನ್ನಡಪರ ಹೋರಾಟಗಳಲ್ಲಿ ಬಾಗವಹಿಸುವ ಮೂಲಕ ಪರಿಷತ್ತಿಗೆ ಚೈತನ್ಯ ನೀಡಬೇಕಿದ್ದು, ನಮ್ಮೆಲ್ಲರ ಸಹಕಾರ ನೂತನ ಅಧ್ಯಕ್ಷರಿಗೆ ಇದೆ ಎಂದರು.

ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್ ಮಾತನಾಡಿ, ಜಿಲ್ಲಾ ಕಸಾಪ ಚುಣಾವಣೆಗೆ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಆದರೆ ಅಧ್ಯಕ್ಷರ ಆಯ್ಕೆ ಬಗ್ಗೆ  ಜಿಲ್ಲಾ ಕಸಾಪದ ನಿಕಟಪೂರ್ವ ಅಧ್ಯಕ್ಷರು ಯಾವುದೇ ಪ್ರತಿಕ್ರಿಯೆ ನೀಡದೇ ದೂರ ಉಳಿದು ಸ್ವತಂತ್ರ್ಯವಾಗಿ ಸ್ಪರ್ಧಿಸಿದರು. ಪರಿಷತ್ತಿನ ಶ್ರೇಯೋಭಿವೃದ್ದಿಗಾಗಿ ಕಸಾಪ ಮತದಾರರು ಕೃಷ್ಣಪ್ಪ ಅವರನ್ನು ಬೆಂಬಲಸಿದ್ದಾರೆ. ಅವರು ಅದನ್ನು ಉಳಿಸಿಕೊಂಡು ಹೆಚ್ಚಿನ ಕೆಲಸ ಮಾಡುವ ವಿಶ್ವಾಸವಿದೆ ಎಂದರು.

ಸಭೆಯಲ್ಲಿ ದೇವನಹಳ್ಳಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ನಂಜೇಗೌಡ, ಕಲಾವಿದ ರಬ್ಬನಹಳ್ಳಿ ಕೆಂಪಣ್ಣ, ಮುಖಂಡರಾದ ಕೆಂಪರಾಜ್ ಮೊದಲಾದವರು ಭಾಗವಹಿಸಿದ್ದರು.

ಸಭೆಯಲ್ಲಿ ಎಂಎಸ್‍ಜಿಪಿ ಘಟಕದ ವಿರುದ್ದ ಹೋರಾಟ ನಡೆಸುತ್ತಿರುವವರನ್ನು ಬೆಂಬಲಿಸಿ, ಪ್ರತಿಭಟನೆಯನ್ನು ಧರಣಿ ಹತ್ತಿಕ್ಕಿದ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!